ಸೈಂಟ್ ಜೋಕಿಮ್ ವಿದ್ಯಾಸಂಸ್ಥೆ: ವಿದ್ಯಾರ್ಥಿ ಸಂಘದ ಉದ್ಘಾಟನೆ

0

  • ವಿದ್ಯಾರ್ಥಿ ಸಂಘದ ಮೂಲಕ ವಿದ್ಯಾರ್ಥಿಗಳು ಕ್ರಿಯಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ-ವಿಶ್ವನಾಥ ರೈ

 

ಕಡಬ: ಸೈಂಟ್ ಜೋಕಿಮ್ ಸಂಯುಕ್ತ ಪದವಿ ಪೂರ್ವ ಕಾಲೇಜು ಕಡಬ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಂಸ್ಥೆಯ ಸಭಾಭವನದಲ್ಲಿ ನೆರವೇರಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದ ಕೊಕ್ಕಡ ಸ.ಪ.ಪೂ. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ರೈ ಕಡಬ ಮಾತನಾಡಿ ವಿದ್ಯಾರ್ಥಿಗಳು ಕ್ರಿಯಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿ ಸಂಘಟನೆ ಮುಖ್ಯ ಪಾತ್ರ ವಹಿಸುತ್ತದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ಉತ್ತಮ ನಾಯಕರಾಗಲು ಪ್ರೇರೇಪಿಸುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ| ಅರುಣ್ ವಿಲ್ಸನ್ ಲೋಬೊರವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದ್ದು ವಿದ್ಯಾ ಸಂಸ್ಥೆಯಲ್ಲಿ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಸಂಸ್ಥೆಯ ರಚನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಸಂಸ್ಥೆಗೆ ಕೀರ್ತಿ ತರಬೇಕೆಂದು ಅವರು ಹೇಳಿದರು.

ಕಾಲೇಜು ವಿದ್ಯಾರ್ಥಿ ಸಂಘದ ನಿರ್ದೇಶಕ ರಾಜೇಶ್ ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸೈಮನ್ ಲೂಯಿಸ್ ರೊಡ್ರಿಗಸ್, ಸೈಂಟ್ ಆನ್ಸ್ ಪ್ರೌಢ ಶಾಲೆಯ ಪ್ರಾಚಾರ್ಯರಾದ ವಂ| ಅಮಿತ್ ಪ್ರಕಾಶ್ ರೊಡ್ರಿಗಸ್, ಸೈಂಟ್ ಜೋಕಿಮ್ ಕಾಲೇಜು ಪ್ರಾಚಾರ್ಯರಾದ ಕಿರಣ್ ಕುಮಾರ್, ಹಿಂದಿ ಉಪನ್ಯಾಸಕರಾದ ಮ್ಯಾಥ್ಯೂ ಇ.ಜೆ, ಕಾಲೇಜು ರಕ್ಷಕ-ಶಿಕ್ಷಕ ಸಮಿತಿಯ ಉಪಾಧ್ಯಕ್ಷ ಸತೀಶ್ ನಾಯ್ಕ್, ಪ್ರೌಢಶಾಲಾ ವಿಭಾಗದ ಉಪಾಧ್ಯಕ್ಷೆ ಅಂಜು ರವೀಂದ್ರ, ಕಾಲೇಜು ವಿದ್ಯಾರ್ಥಿ ನಾಯಕ ಶ್ರೀಹರಿ ಎ ವಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಮಹಮದ್ ಕನಝ್ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಲತಾ ಸ್ವಾಗತಿಸಿದರು. ಉಪನ್ಯಾಶಸಕಿ ಸುಜಾ ವಿ.ಜೆ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸಂಘದ ನಿರ್ದೇಶಕಿ ಶ್ರೀಮತಿ ಏಲಿಕುಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here