ಬನ್ನೂರು ಗ್ರಾಪಂನಲ್ಲಿ ಫಿಲೋಮಿನಾ ಕಾಲೇಜಿನ ಸಮಾಜ ಕಾರ್ಯ ವಿಭಾಗದಿಂದ ಯೋಗ ದಿನಾಚರಣೆ

0

ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ಮತ್ತು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಜಂಟಿ ಆಶ್ರಯದಲ್ಲಿ ಬನ್ನೂರು ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ಜಯ. ಎ ಉದ್ಘಾಟಿಸಿ ಯೋಗದ ಮಹತ್ವವನ್ನು ವಿವರಿಸುತ್ತಾ, ಏಕಾಗ್ರತೆ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಯೋಗ ಉತ್ತಮ ಎಂದರು. ತರಬೇತುದಾರರಾದ ದಮಯಂತಿಯವರು ಪ್ರತಿನಿತ್ಯವೂ ಯೋಗ ಪ್ರಾಣಾಯಾಮಗಳನ್ನು ಮಾಡುವುದರಿಂದ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಲು ಯೋಗ ಅವಶ್ಯಕ ಮತ್ತು ಮನಸ್ಸಿನ ಚಂಚಲತೆಯನ್ನು ದೂರಮಾಡಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದು ಹೇಳುತ್ತ, ಸುಮಾರು ಎರಡು ಗಂಟೆಗಳ ಕಾಲ ಯೋಗಾಸನವನ್ನು ಮಾಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ, ಹಾಗೂ ಸರ್ವ ಸದಸ್ಯರು, ಸಮುದಾಯ ಆರೋಗ್ಯ ಅಧಿಕಾರಿಗಳು,ಆಶಾಕಾರ್ಯಕರ್ತೆಯರು,ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here