ಪಡ್ನೂರು ಶಾಲೆಯಲ್ಲಿ ಫಿಲೋಮಿನಾ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಪರಿಸರ ದಿನಾಚರಣೆ

0

 

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಕಾಲೇಜು ಹಾಗೂ ಗ್ರಾಮ ಪಂಚಾಯತ್ ಬನ್ನೂರು ಇದರ ಜಂಟಿ ಆಶ್ರಯದಲ್ಲಿ ಪಡ್ನೂರು ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.17 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಜಯ.ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ, ಹಾಗೂ ಸರ್ವ ಸದಸ್ಯರು,ಶಿಕ್ಷಕರುಗಳು,ಎಸ್.ಡಿ.ಎಂ.ಸಿ ಸದಸ್ಯರು ಸ.ಹಿ.ಪ್ರಾ. ಶಾಲೆ ಪಡ್ನೂರು ಮತ್ತು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here