ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆಯವರಿಗೆ ಉಪ್ಪಿನಂಗಡಿ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಅಭಿನಂದನಾ ಕಾರ್‍ಯಕ್ರಮ, ದತ್ತಿನಿಧಿ ಪ್ರಧಾನ ಸಮಾರಂಭ

0

ಉಪ್ಪಿನಂಗಡಿ: ಇಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಪ್ರೌಢ ಶಾಲಾ ವಿಭಾಗದ ಉಪ ಪ್ರಾಂಶುಪಾಲರು, ಶಿಕ್ಷಕ ವೃಂದ ಮತ್ತು ಶಾಲಾಭಿವೃದ್ಧಿ ಸಮಿತಿ ಇವರುಗಳ ಸಹಯೋಗದೊಂದಿಗೆ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ, ಹಾಗೂ ನಿವೃತ್ತ ಉಪ ಪ್ರಾಚಾರ್ಯ ದಿವಾಕರ ಆಚಾರ್ಯ ಗೇರುಕಟ್ಟೆ ಇವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ದತ್ತಿನಿಧಿ ಪ್ರಧಾನ ಸಮಾರಂಭ ಜುಲೈ 2ರಂದು ಜರಗಲಿದೆ ಎಂದು ಉಪ ಪ್ರಾಂಶುಪಾಲ ಶ್ರೀಧರ್ ಭಟ್ ತಿಳಿಸಿದರು.

ಅವರು ಜೂನ್ ೩೦ರಂದು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್‍ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿ ಕಾರ್‍ಯಾಧ್ಯಕ್ಷ ಎನ್. ಉಮೇಶ್ ಶೆಣೈ ಉದ್ಘಾಟಿಸಲಿದ್ದಾರೆ. ಸುಳ್ಯದ ನಿವೃತ್ತ ಪ್ರಾಂಶುಪಾಲರಾದ ಡಿ.ಎಸ್. ಕುಶಾಲಪ್ಪ ಗೌಡ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಉಷಾ ಚಂದ್ರ ಮುಳಿಯ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ, ಭ್ರಷ್ಟಾಚಾರ ನಿಗ್ರಹದಳದ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನಾಯಕ ಪೈ, ಗ್ರಾಮ ಪಂಚಾಯಿತಿ ಸದಸ್ಯ ಯು.ಟಿ. ತೌಸೀಫ್, ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಧೀರ್ ಕುಮಾರ್ ಯಂ, ಪುತ್ತೂರು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಕೆ. ಇವರುಗಳ ಗೌರವ ಉಪಸ್ಥಿತಿಯಲ್ಲಿ ನಡೆಯುವ ಕಾರ್‍ಯಕ್ರಮದಲ್ಲಿ ರಾಮಕುಂಜ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗಣರಾಜ ಕುಂಬ್ಳೆ ಅಭಿವಂದನಾ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ದತ್ತಿನಿಧಿ ಪ್ರಧಾನ:
ಕಾರ್‍ಯಕ್ರಮದಲ್ಲಿ ಪ್ರೌಢ ಶಾಲಾ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತಿನಿಧಿ ಪ್ರಧಾನ ನಡೆಯಲಿದೆ. ೨೦೦೮ರ ಸುವರ್ಣ ಮಹೋತ್ಸವದ ನಂತರದ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಹಾಗೂ ಇತರ ಸಾಧನೆಗಳ ಬಗ್ಗೆ ಸ್ಮರಣ ಸಂಚಿಕೆ “ಸೃಜನ್” ಬಿಡುಗಡೆ ಆಗಲಿದೆ. ಸಭಾ ಕಾರ್‍ಯಕ್ರಮದ ಬಳಿಕ ಯಕ್ಷಗಾನ ತಾಳಮದ್ದಳಿ ನಡೆಯಲಿದೆ ಎಂದು ಉಪ ಪ್ರಾಂಶುಪಾಲ ಶ್ರೀಧರ್ ಭಟ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಸದಸ್ಯರುಗಳಾದ ರಾಮಚಂದ್ರ ಮಣಿಯಾಣಿ, ಚಂದ್ರಶೇಖರ ಮಡಿವಾಳ, ಜಗದೀಶ್ ಶೆಟ್ಟಿ, ಶಿಕ್ಷಕ ವಿಜಯಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here