ನಾಳೆ(ಜು.2) ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರ ಜು.2ರಂದು ಮದ್ಯಾಹ್ನ ಗಂಟೆ 1.30ಕ್ಕೆ ಬೆಟ್ಟಂಪಾಡಿ ಸ.ಪ್ರ.ದ.ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದು ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಯೂಸುಫ್ ರೆಂಜಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸೆನ್ ಪೊಲೀಸ್ ಸ್ಟೇಷನ್ ದ.ಕ ಜಿಲ್ಲೆ ಇದರ ಪೊಲೀಸ್ ಇನ್ಸ್‌ಪೆಕ್ಟರ್ ಸವಿತ್ರ್ ತೇಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವರದರಾಜ್ ಚಂದ್ರಗಿರಿ, ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಕರ್ನಾಟಕ ಪತ್ರಕರ್ತರ ಸಂಘದ ದ.ಕ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ನಮ್ಮ ಟಿವಿಯ ಆಡಳಿತ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಯೂಸುಫ್ ರೆಂಜಲಾಡಿ ಹಾಗೂ ಪ್ರ.ಕಾರ್ಯದರ್ಶಿ ಲಕ್ಷ್ಮೀಕಾಂತ್ ರೈ ಅನಿಕೂಟೇಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here