ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು : ಅಪ್ರಾಪ್ತ ಯುವತಿಯ ಜತೆ ಲೈಂಗಿಕ ದೌರ್ಜನ್ಯ ಎಸಗಿ ಯುವತಿ ಗರ್ಭವತಿಯಾಗಲು ಕಾರಣನಾದ ಯುವಕನ ವಿರುದ್ಧ ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರಿಯಡ್ಕ ನಿವಾಸಿ ಸಂದೀಪ (22) ಎಂಬಾತ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದು ಅಜ್ಜಾವರ ಗ್ರಾಮದ ಕಾಂತಮಂಗಲ ಸಮೀಪದ ಯುವತಿಯ ಮನೆಯವರು ಪೋಲೀಸರಿಗೆ ದೂರು ನೀಡಿದ್ದಾರೆ.

ಯುವತಿಗೆ ಯುವಕ ದೂರದ ಸಂಬಂಧಿಯಾಗಿದ್ದು ಅವರಿಬ್ಬರು ಕೆಲ ಸಮಯದಿಂದ ದೂರವಾಣಿ ಮೂಲಕ ಮಾತನಾಡುತ್ತಿದ್ದರು. ಕೆಲ ತಿಂಗಳ ಹಿಂದೆ ಯುವತಿಯ ದೊಡ್ಡಪ್ಪನ ಮನೆಯಲ್ಲಿ ಮಾರಿಪೂಜೆಗೆ ಸಂದೀಪ ಬಂದಿದ್ದು ರಾತ್ರಿ ವೇಳೆ ಅಪ್ರಾಪ್ತ ಯುವತಿಯ ಮೇಲೆ ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದು ಈ ವಿಷಯ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ. ಜೂ.22 ರಂದು ಯುವತಿಗೆ ನೋವು ಬಂದು ಆಕೆಯ ಅಕ್ಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸ್ಕ್ಯಾನಿಂಗ್ ನಡೆಸಿದ ಸಂದರ್ಭ ಆಕೆ ಗರ್ಭಿಣಿಯಾಗಿರುವುದು ತಿಳಿದು ಬದಿದೆ. ಆಕೆಯನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದ್ದು ಬಳಿಕ ಪೋಲೀಸರಿಗೆ ದೂರು ನೀಡಲಾಗಿದೆ. ಜೂ.28 ರಂದು ಸಂದೀಪನ ಮೇಲೆ ಸುಳ್ಯ ಪೋಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here