ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ನೂತನ ಸರಕಾರ ರಚನೆ -ಪುತ್ತೂರು ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷಾಚರಣೆ

0

  • ದೇಶಕ್ಕೆ ಬಿಜೆಪಿ ಅನಿವಾರ್ಯವೆಂದು ಪ್ರಾದೇಶಿಕ ಪಕ್ಷಗಳಿಗೂ ಅರಿವಾಗಿದೆ – ಸಂಜೀವ ಮಠಂದೂರು
  • ಬಿಜೆಪಿ ಅಧಿಕಾರಕ್ಕಾಗಿ ರಾಜಕೀಯ ಮಾಡುವುದಿಲ್ಲ – ಚಂದ್ರಶೇಖರ್ ರಾವ್ ಬಪ್ಪಳಿಗೆ

 

ಪುತ್ತೂರು: ಮಹಾರಾಷ್ಟ್ರದಲ್ಲಿ ನೂತನವಾಗಿ ಬಿಜೆಪಿ ಮತ್ತು ಶಿವಸೇನೆ ಸರಕಾರ ರಚನೆಯಾದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯ ಮುಂದೆ ಶಾಸಕರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷಾಚರಣೆ ವ್ಯಕ್ತಪಡಿಸಿದರು.


ದೇಶಕ್ಕೆ ಬಿಜೆಪಿ ಅನಿವಾರ್ಯವೆಂದು ಪ್ರಾದೇಶಿಕ ಪಕ್ಷಗಳಿಗೂ ಅರಿವಾಗಿದೆ:
ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರಕಾರ ಮತ್ತು ನಾಯಕತ್ವವನ್ನು ಮತ್ತೊಮ್ಮೆ ದೇಶದ ಜನರು ಒಪ್ಪಿಕೊಂಡಿದ್ದಾರೆ. ಅದೆ ರೀತಿ ಪ್ರಾದೇಶಿಕ ಪಕ್ಷಗಳು ಕೂಡಾ ಇವತ್ತು ಬಿಜೆಪಿ ದೇಶಕ್ಕೆ ಅನಿವಾರ್ಯ ಎಂದು ಹೇಳಿ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ ಮತ್ತು ಶಿವಸೇನೆ ಸರಕಾರವನ್ನು ತರುವ ಕೆಲಸ ಮಾಡಿ ಸಂದೇಶ ನೀಡಿದೆ ಎಂದು ಹೇಳಿದರು. ಹಿಂದೆ ಕರ್ನಾಟಕದಲ್ಲಿ ಜೆಡಿಎಸ್‌ನೊಂದಿಗೆ ಅತೀ ಹೆಚ್ಚು ಬಿಜೆಪಿ ಶಾಸಕರನ್ನು ಹೊಂದಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಪದವಿಯನ್ನು ತ್ಯಾಗ ಮಾಡಿ ದೇಶಕ್ಕೆ ಸಂದೇಶ ನೀಡಿದ್ದರು. ಅದೇ ರೀತಿ ಇವತ್ತು ಮಹಾರಾಷ್ಟ್ರದಲ್ಲಿ ಅತೀ ಫಡ್ನವಿಸ್ ಅವರು ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಹೊಂದಿದ್ದರು. ಶಿವಸೇನೆಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟು ನಮಗೆ ಅಧಿಕಾರ ಮುಖ್ಯವಲ್ಲ. ಈ ದೇಶದ ರಾಷ್ಟ್ರತೆ, ಸಮಗ್ರತೆ, ಹಿಂದುತ್ವದ, ಬಿಜೆಪಿ ವಿಚಾರ ಪ್ರಮುಖವಾದ ಭಾಗ ಎಂದು ಬಾಲಾಟಾಕ್ರೆಯವರು ಹಿಂದುತ್ವವನ್ನು ಪ್ರತಿಪಾದಿಸಿಕೊಂಡು ಹಿಂದೆ ಬಿಜೆಪಿ ಜೊತೆ ಮೈತ್ರಿ ಸರಕಾರ ಮಾಡಿಕೊಂಡಿದ್ದರೋ ಅದನ್ನು ನೆನಪು ಮಾಡುವ ಕೆಲಸನವನ್ನು ಫಡ್ನವಿಸ್ ಮತ್ತು ಏಕನಾಥ್ ಸಿಂಧ್ಯಾ ಅವರು ಮಾಡಿದ್ದಾರೆ. ಕಾಂಗ್ರೆಸ್‌ನ ಅಪವಿತ್ರ ಮೈತ್ರಿಯನ್ನು ಜನರು ಸಹಿಸಿಕೊಳ್ಳುವುದಿಲ್ಲ ಎಂದು ದೇಶಕ್ಕೆ ತಿಳಿದು ಬಂದಿದೆ ಎಂದರು.

ಬಿಜೆಪಿ ಅಧಿಕಾರಕ್ಕಾಗಿ ರಾಜಕೀಯ ಮಾಡುವುದಿಲ್ಲ:
ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ ಅವರು ಮಾತನಾಡಿ ನಾವು ಅಧಿಕಾರಕ್ಕಾಗಿ ರಾಜಕೀಯ ಮಾಡುವುದಿಲ್ಲ ಎಂದು ಮಹರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಮುಖ್ಯಮಂತ್ರಿ ಸ್ಥಾನವನ್ನು ಏಕನಾಥ ಸಿಂದ್ಯಾ ಅವರಿಗೆ ಕೊಡುವ ಮೂಲಕ ಬಿಜೆಪಿ ದೇಶಕ್ಕೆ ಮಾದರಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಬಿಜೆಪಿ ಮಂಡಲದ ಅಧ್ಯಕ್ಷ ಪಿ.ಜಿ ಜಗ‌ನ್ನಿವಾಸ್   ರಾವ್. ಪ್ರಧಾನ ಕಾರ್ಯದರ್ಶಿಗಳಾದ ನಿತೀಶ್ ಶಾಂತಿವನ, ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಎಸ್ ಶೆಟ್ಟಿ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಬಿಜತ್ರೆ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಸಭೆ ಸದಸ್ಯರಾದ ಸುಂದರ ಪೂಜಾರಿ ಬಡಾವು, ದೀಕ್ಷಾ ಪೈ, ನವೀನ್ ಪೆರಿಯತ್ತೋಡಿ, ಗೌರಿ ಬನ್ನೂರು, ಜಿಲ್ಲಾ ಬಿಜೆಪಿ ಸದಸ್ಯ ರಾಮ್‌ದಾಸ್ ಹಾರಾಡಿ, ವಿಶ್ವನಾಥ ಕುಲಾಲ್, ಗೋಪಾಲಕೃಷ್ಣ ಪಟೀಲ್ ಚಾರ್ವಾಕ, ಎಪಿಎಂಸಿ ಮಾಜಿ ಸದಸ್ಯ ತೀರ್ಥಾನಂದ ದುಗ್ಗಳ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here