`ದೊಡ್ಡ ದೊಡ್ಡ ಅಧಿಕಾರಿಗಳನ್ನು ಹಿಡಿಯೋದು ಬಿಟ್ಟು ಬಾಲಂಗೋಚಿಗಳನ್ನು ಹಿಡಿದುಕೊಂಡು ಕೋರ್ಟಿಗೆ ಬರುತ್ತೀರಿ’

0

ಎಸಿಬಿಗೆ ಹೈಕೋರ್ಟ್ ತರಾಟೆ

  • ಎಸಿಬಿಯೇ ಅತಿದೊಡ್ಡ ಭ್ರಷ್ಟರ ಕೂಪ
  • ಭ್ರಷ್ಟಾಚಾರವೇ ಎಸಿಬಿಗೆ ದಂಧೆಯಾಗಿ ಪರಿಣಮಿಸಿದೆ
  •  ಸರಕಾರ ಉದ್ದೇ ಶಪೂರ್ವಕವಾಗಿ ಕಳಂಕಿತರನ್ನು ಎಸಿಬಿಗೆ ಹಾಕುತ್ತಿದೆ

ಬೆಂಗಳೂರು:`ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಭ್ರಷ್ಟಾಚಾರವೇ ದಂಧೆಯಾಗಿ ಪರಿಣಮಿಸಿದೆ.ಸ್ವಯಂ ಎಸಿಬಿಯೇ ಅತಿ ದೊಡ್ಡ ಭ್ರಷ್ಟರ ಕೂಪವಾಗಿದೆ.ಇದರ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ,ಎಸಿಬಿ ಕಚೇರಿಗಳೆಲ್ಲಾ ಕಲೆಕ್ಷನ್ ಸೆಂಟರ್‌ಗಳಾಗಿವೆ,ದೊಡ್ಡ ದೊಡ್ಡ ಐಎಎಸ್,ಐಪಿಎಸ್ ಅಧಿಕಾರಿಗಳನ್ನು ಹಿಡಿಯೋದು ಬಿಟ್ಟು ಬಾಲಂಗೋಚಿಗಳನ್ನು ಹಿಡಿದುಕೊಂಡು ಕೋರ್ಟಿಗೆ ಬರುತ್ತೀರಿ’ ಎಂದು ಎಸಿಬಿಯನ್ನು ಹೈಕೋರ್ಟ್ ತರಾಟೆಗೆತ್ತಿಕೊಂಡಿದೆ.

 

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎಚ್.ಪಿ.ಸಂದೇಶ್‌ರವರು ಎಸಿಬಿ ವಿರುದ್ಧ ಈ ಮಾತುಗಳನನ್ನು ಹೇಳಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರು ಪ್ರಕರಣದ ವಿವರಣೆ ನೀಡಲು ಮುಂದಾಗುತ್ತಿದ್ದಂತೆಯೇ ಎಸಿಬಿ ಪರ ವಕೀಲ ಪಿ.ಎನ್.ಮನ ಮೋಹನ್ ಅವರು, `ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.ಪ್ರಕರಣ ರದ್ದು ಕೋರಿದ್ದ ಮಂಜುನಾಥ್ ಅವರ ಅರ್ಜಿಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.ಈ ಮಾತಿಗೆ ನ್ಯಾಯಮೂರ್ತಿಗಳು, `ಎಸಿಬಿ ಏಕೆ ರಚನೆಯಾಗಿದೆ ನಿಮಗೆ ಗೊತ್ತಾ?, ಇವತ್ತು ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ.ಸರ್ಕಾರ ಉzಶಪೂರ್ವಕವಾಗಿ ಕಳಂಕಿತರನ್ನು ಇಲ್ಲಿಗೆ ಹಾಕುತ್ತಿದೆ.ನೀವು ಕೇವಲ ಗುಮಾಸ್ತರ ವಿರುದ್ಧ ಕೇಸು ಬುಕ್ ಮಾಡುವುದಲ್ಲ’ಎಂದು ಕಟುಮಾತಿನಲ್ಲಿ ತರಾಟೆಗೆ ತೆಗೆದುಕೊಂಡರು.

`ಕಂದಾಯ ಅಧಿಕಾರಿಗಳ ಬಳಿ ಹೋಗಿ ಅಲ್ಲಿ ಏನೇನೆಲ್ಲಾ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ.ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್‌ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ’ ಎಂದೂ ನ್ಯಾಯಮೂರ್ತಿಗಳು ಹೇಳಿದರು.

ಕಂದಾಯ ಅಧಿಕಾರಿಗಳ ಬಳಿ ಹೋಗಿ ಅಲ್ಲಿ ಏನೇನೆಲ್ಲಾ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ.ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್‌ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ ಎಂದೂ ನ್ಯಾಯಮೂರ್ತಿಗಳು ಹೇಳಿದರು.

LEAVE A REPLY

Please enter your comment!
Please enter your name here