ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ದಿನೇಶ್ ಗೌಡ ಆಯ್ಕೆ

0

ಕಡಬ: ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಬಿಳಿನೆಲೆಯ ಶಾರದಾ ದಿನೇಶ್ ಗೌಡ ಅವರು ಆಯ್ಕೆಯಾಗಿದ್ದಾರೆ. ಜು.1ರಂದು ಕಡಬ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಹಾಗೂ ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರ ಸಮ್ಮುಖದಲ್ಲಿ ಶಾರದಾ ದಿನೇಶ್ ಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಶಾರದಾ ದಿನೇಶ್ ಗೌಡ ಅವರು ಬಿಳಿನೆಲೆ ಗ್ರಾ.ಪಂ.ನಲ್ಲಿ ಏಳೂವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಒಂದೂವರೆ ವರ್ಷಗಳಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಇವರು ಸಾಮಾಜಿಕ ಹಾಗೂ ರಾಜಕೀಯ, ಉದ್ಯಮ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದಾರೆ.

LEAVE A REPLY

Please enter your comment!
Please enter your name here