ಪುತ್ತೂರು: ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ವತಿಯಿಂದ ಪುತ್ತೂರು ತಾಲೂಕಿನಲ್ಲಿ ವಾಸ್ತವ್ಯವಿರುವ ಕುಲಾಲ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿಗಳನ್ನು ಕರೆಯಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 85 ಅಂಕಗಳನ್ನು ಹಾಗೂ ಪಿಯುಸಿಯಲ್ಲಿ ಶೇಕಡಾ 85 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಅಂಕ ಪಟ್ಟಿ, ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡು ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-07-2022. ಅರ್ಜಿಯನ್ನು ಕುಲಾಲ ಸಂಘದ ಕಛೇರಿಯಿಂದ ಅಥವಾ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಕಛೇರಿಯಿಂದ ಪಡೆದುಕೊಳ್ಳಬಹುದು ಎಂದು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ನವೀನ್ ಕುಲಾಲ್ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9449318792, 9449284123 ಸಂಪರ್ಕಿಸಲು ಅವರು ಕೋರಿರುತ್ತಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.