ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಚನ ಸಾಹಿತ್ಯ ಪಿತಾಮಹ ಡಾ| ಫ.ಗು ಹಳಕಟ್ಟಿ ಜಯಂತಿ

0

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಚನ ಸಾಹಿತ್ಯದ ಪಿತಾಮಹ ಡಾ| ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜನ್ಮದಿನಾಚರಣೆಯು ಜು.2ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಡಾ| ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜೀವನ ಸಾಧನೆಯನ್ನು ತಿಳಿಸಿದರು. ಗ್ರೇಡ್-2 ತಹಶೀಲ್ದಾರ್ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಕಚೇರಿ ದಯಾನಂದ ಸ್ವಾಗತಿಸಿ, ವಂದಿಸಿದರು. ಉಪತಹಶಿಲ್ದಾರ್ ಸುಲೋಚನ ಪಿ.ಕೆ. ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here