ರಕ್ತ ದಾನಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಂತ್ ವೈ ಗೆ ಸನ್ಮಾನ

0

ಕಾಣಿಯೂರು: ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ರೋಟರಿ ಬಾಲಭವನ ಮಣ್ಣಗದ್ದೆ ಮಂಗಳೂರು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ತದಾನಿಗಳಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪ ಇಲ್ಲಿಯ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಂತ್ ವೈ ಇವರನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕರಾದ ಡಾಕ್ಟರ್ ದುರ್ಗಾಪ್ರಸಾದ್ ರವರು ಸನ್ಮಾನಿಸಿದರು.ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣಕನ್ನಡ ಜಿಲ್ಲಾ ಚೇರ್ಮನ್ ಶಾಂತಾರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆರೋಗ್ಯ ಸಮುದಾಯದ ಚೇರ್ಮನ್ ಡಾಕ್ಟರ್ ಸಚ್ಚಿದಾನಂದ ರೈ, ಡಾಕ್ಟರ್ ಜಯಂತ್ ಭಟ್, ಮೋಹನ್ ಶೆಟ್ಟಿ ಗುರುದತ್ ಉಪಸ್ಥಿತರಿದ್ದರು. ಪ್ರವೀಣ್ ಸ್ವಾಗತಿಸಿ, ಕಾರ್ಯದರ್ಶಿ ಕುಸುಮಾಧರ ಬಿ ಕೆ ವಂದಿಸಿದರು. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here