ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೧-೨೨ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ದೀಪ ಪ್ರದಾನ ಸಮಾರಂಭವು ಜುಲೈ ೨ರಂದು ಜರಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಂಡು ಇನ್ನಷ್ಟು ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ, ಸಂಚಾಲಕ ಯು.ಜಿ. ರಾಧ, ಮುಖ್ಯ ಶಿಕ್ಷಕಿ ವೀಣಾ ಪ್ರಸಾದ್ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಎಚ್ಕೆ. ಪ್ರಕಾಶ್ ಉಪಸ್ಥಿತರಿದ್ದರು. ಕಳೆದ ಸಾಲಿನ ದ್ವಿತೀಯ ಪಿಯುಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಮಾಡುವುದರೊಂದಿಗೆ ಬೀಳ್ಕೊಡಲಾಯಿತು. ವಿದ್ಯಾರ್ಥಿನಿ ಕುಮಾರಿ ವೈಭವಿ ಕಾರ್ಯಕ್ರಮ ನಿರೂಪಿಸಿದರು.