ಪುತ್ತೂರು: ಪುತ್ತೂರು ವಿವೇಕಾನಂದ ಕಾಲೇಜು ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ 41ನೇ ಮಾನ್ಸೂನ್ ಚೆಸ್ ಪಂದ್ಯಾಟ ಜು. 6ರಿಂದ 8ರವರೆಗೆ ವಿವೇಕಾನಂದ ಕಾಲೇಜಿನ ಸುವರ್ಣ ಮಹೋತ್ಸವದ ಸಭಾಭವನದಲ್ಲಿ ನಡೆಯಲಿದೆ. ಪಂದ್ಯಾಟ ಸ್ವಿಸ್ ಮಾದರಿಯಲ್ಲಿ ನಡೆಯಲಿದ್ದು ದ.ಕ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಗೊಳಪಟ್ಟ ಎಲ್ಲಾ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಭಾಗವಹಿಸುವ ವಿಧ್ಯಾರ್ಥಿಗಳು ಚೆಸ್ ಬೋರ್ಡ್ ಮತ್ತು ಚೆಸ್ ದಳವನ್ನು ಸ್ವತಃ ತರಬೇಕು ಹಾಗೂ ಪ್ರಾಂಶುಪಾಲರ ಸಹಿ ಇರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಜು.5ರ ಒಳಗೆ ನೊಂದಾಯಿಸಿಕೊಳ್ಳಬೇಕು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.