ಉಪ್ಪಿನಂಗಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ಪದಗ್ರಹಣ

0

  • ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಉಪ್ಪಿನಂಗಡಿ ವಲಯ ಸಾಮೂಹಿಕ ಶ್ರೀ ಸತ್ಯನಾರಯಣ ಪೂಜಾ ಸಮಿತಿ ಮತ್ತು ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಇದರ ಆಶ್ರಯದಲ್ಲಿ 2ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭೆ ಜುಲೈ 2ರಂದು ಉಪ್ಪಿನಂಗಡಿ ನೇತ್ರಾವತಿ ಸಮುದಾಯ ಭವನದಲ್ಲಿ ಜರಗಿತು.

 


ಧಾರ್ಮಿಕ ಸಭೆಯಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ  ಹರಿಣಿ ಪುತ್ತೂರಾಯ ಮಾತನಾಡಿ ದೇಹವನ್ನೂ ಆತ್ಮವನ್ನೂ ಉನ್ನತೀಕರಣಗೊಳಿಸುವುದು ನಮ್ಮ ಧ್ಯೇಯವಾಗಿರಬೇಕು. ಅದಕ್ಕಾಗಿ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣವನ್ನು ಎಲ್ಲರೂ ಪಡೆಯುವಂತಾಗಬೇಕೆಂದು ಎಂದರು.

ಕಾರ್‍ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಕಾರ್‍ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿ ಸುಂದರ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ಭಜನಾ ಪರಿಷತ್ ಗೌರವಾಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ ಸಂದರ್ಭೊಚಿತವಾಗಿ ಮಾತನಾಡಿದರು. ವಲಯಾಧ್ಯಕ್ಷ ಪ್ರಶಾಂತ್ ಪೆರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಚಂದಪ್ಪ ಮೂಲ್ಯ, ಜಯಂತ ಪೊರೋಳಿ, ಕೈಲಾರ್ ರಾಜ್‌ಗೋಪಾಲ ಭಟ್, ಸಣ್ಣಣ್ಣ ಯಾನೆ ಸಂಜೀವ ಮಡಿವಾಳ, ವಿಶ್ವನಾಥ ನಾಯ್ಕ್, ಆನಂದ ಸಪಲ್ಯ, ಧರ್ಣಪ್ಪ ಗೌಡ, ಶೇಖರ ಪಂಚೇರು, ದಿನಕರ ಆಚಾರ್ಯ, ಆನಂದ ಕುಂಟಿನಿ ಉಪಸ್ಥಿತರಿದ್ದರು. ಯೋಜನಾಧಿಕಾರಿ ಆನಂದ ಕೆ. ಸ್ವಾಗತಿಸಿ, ಚಂದ್ರಶೇಖರ್ ವಂದಿಸಿದರು. ಲೋಕೇಶ್ ಬೆತ್ತೋಡಿ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here