ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕಳೆದ 55 ವರ್ಷಗಳಿಂದ ವಿಜ್ರಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಜರಗುತ್ತಿರುವ 56 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಜು.೩ ರಂದು ಪುತ್ತೂರು ಆದರ್ಶ ಆಸ್ಪತ್ರೆ ಸಭಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅವರು ಆಮಂತ್ರಣಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ, ಖಜಾಂಜಿ ನೀಲಂತ್, ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಜಯಶ್ರೀ ಎಸ್ ಶೆಟ್ಟಿ, ನಗರಸಭೆ ಮಾಜಿ ಸದಸ್ಯ ಸುಜೀಂದ್ರ ಪ್ರಭು, ಅಶೋಕ್ ಕುಂಬ್ಳೆ, ವಿಶ್ವನಾಥ ಗೌಡ ಬನ್ನೂರು, ಗೋಪಾಲ್ , ಭಾಮಿ ಜಗದೀಶ್ ಶೆಣೈ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ಆಮಂತ್ರಣ ಪತ್ರ ಬಿಡುಗಡೆ ಬಳಿಕ ಉತ್ಸವದ ಕುರಿತು ಸಮಿತಿ ಸಭೆ ನಡೆಯಿತು.

LEAVE A REPLY

Please enter your comment!
Please enter your name here