ವಿಕಲಚೇತನರ ಜೊತೆ ಭಾರತ, ಕರ್ನಾಟಕ ಸರಕಾರವಿದೆ – ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆಯಲ್ಲಿ ಶಾಸಕ ಸಂಜೀವ ಮಠಂದೂರು

0

ಪುತ್ತೂರು:ಅಂಗವೈಕಲ್ಯ ಹೊಂದಿರುವ ವಿಕಲಚೇತನರು ತಮ್ಮ ಜೀವನ ಮಾಡಲು ಕಷ್ಟ ಸಾಧ್ಯ ಎಂಬಂತ ಸಂದರ್ಭದಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂಬ ಸಂದೇಶವನ್ನು ಭಾರತ ಸರಕಾರ ಮತ್ತು ಕರ್ನಾಟಕ ಸರಕಾರ ಮಾಡುತ್ತದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು.


ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪುತ್ತೂರು ವಿಕಲಚೇತನರ ಸೇವಾ ಕೇಂದ್ರ ಕಚೇರಿ, ತಾ.ಪಂ ಕಚೇರಿ ಸಹಕಾರದೊಂದಿಗೆ ಜಿಲ್ಲಾ ವಿಕಲ ಚೇತನರ ಹಾಗು ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಜು.4 ರಂದು ತಾ.ಪಂ ಮಿನಿ ಸಭಾಂಗಣದಲ್ಲಿ ನಡೆದ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭೆ ಅಧ್ಯಕ್ಷ ಕೆ ಜೀವಂದರ್ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಯೋಜನ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸಹಾಯಕ ಕಮೀಷನರ್ ಗಿರೀಶ್ ನಂದನ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀಲತಾ ಮಾತನಾಡಿದರು. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಜಿಲ್ಲಾ ವಿಕಲಚೇತನ ಮತ್ತು ಹಿರಿಯರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಕಲಚೇತನರ ತಾಲೂಕು ನೋಡೆಲ್ ಅಧಿಕಾರಿ ಸ್ವಾಗತಿಸಿದರು. ಮೋಹನ್ ವಂದಿಸಿದರು. 9 ಮಂದಿ ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here