ಕಾಣಿಯೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಶಾಲಾ ವಿದ್ಯಾರ್ಥಿಗಳಿಗೆ ಗಿಡ ವಿತರಣೆ

0

ಕಾಣಿಯೂರು: ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಬೆಳ್ಳಿ ಹಬ್ಬ ಆಚರಿಸುತ್ತಿರುವ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಕಾಣಿಯೂರು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸಾಮಾಜಿಕ ಅರಣ್ಯ ಪುತ್ತೂರು ವಿಭಾಗದ ವಲಯಾರಣ್ಯಾಧಿಕಾರಿ ವಿದ್ಯಾರಾಣಿ ಮಾತನಾಡಿ ವನಮಹೋತ್ಸವವು ಮರಗಳ ಉತ್ಸವವಾಗಿದ್ದು ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ವಹಿಸಿ,ಪ್ರತಿಯೊಬ್ಬರು ಗಿಡಗಳನ್ನು ನೆಡಬೇಕು ಎಂದು ಹೇಳಿದರು.ವೇದಿಕೆಯಲ್ಲಿ ಕಾಣಿಯೂರು ವಿಶ್ವಜ್ಞ ಯುವಕ ಮಂಡಲದ ಮಾಜಿ ಅಧ್ಯಕ್ಷ ಸುಧಾಕರ ಆಚಾರ್ಯ ಅಬೀರ,ಶಾಲಾ ಮುಖ್ಯಗುರು ಪುಂಡಲೀಕ ಪೂಜಾರ್, ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸ್ ವಹಿಸಿದ್ದರು. ಯುವಕ ಮಂಡಲದ ಅಧ್ಯಕ್ಷ ಸುರೇಶ್ ಓಡಬಾಯಿ ಸ್ವಾಗತಿಸಿ,ಶಿಕ್ಷಕಿ ಮೋಹಿನಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಕಾರ್ಯಕ್ರಮ ನಿರೂಪಿಸಿದರು.ಕಾಣಿಯೂರು ಗ್ರಾ.ಪಂ.ಸದಸ್ಯ ವಸಂತ ಪೆರ್ಲೋಡಿ, ಬೆಳಂದೂರು ಗ್ರಾ.ಪಂ.ಸದಸ್ಯರಾದ ಜಯಂತ ಅಬೀರ,ಗೌರಿ ಮಾದೋಡಿ, ಎಸ್ ಡಿಎಂಸಿ ಮಾಜಿ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು,ಯುವಕ ಮಂಡಲದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಮುಗರಂಜ,ಪುನೀತ್ ಕಲ್ಪಡ,ಸದಸ್ಯರರಾದ ರಾಜೇಶ್ ಮೀಜೆ,ಜಗದೀಶ್ ಪೆರ್ಲೋಡಿ, ಕೇಶವ ಕಾಣಿಯೂರು,ದಿನೇಶ್ ಪೈಕ,ನಾರಾಯಣ ಓಡಬಾಯಿ, ಎಸ್ ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು,ಶಾಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು. ಶಾಲಾ ಆವರಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೆ ಗಿಡ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here