ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ ಸಭೆಯಲ್ಲಿ ಇಸ್ಲಾಂ ಧರ್ಮದ ಅವಹೇಳನ-ಮುಸ್ಲಿಂ ಒಕ್ಕೂಟದಿಂದ ಪೊಲೀಸರಿಗೆ ದೂರು

0

ಪುತ್ತೂರು: ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಜೂ.29ರಂದು ಪುತ್ತೂರು ದರ್ಬೆ ಸರ್ಕಲ್‌ನಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಭಾಷಣಕಾರರಾದ ಶ್ರೀಕೃಷ್ಣ ಉಪಾಧ್ಯಾಯ ಹಾಗೂ ನರಸಿಂಹ ಮಾಣಿಯವರು ಇಸ್ಲಾಂ ಧರ್ಮವನ್ನು ನಿಂದಿಸಿ ಕೋಮು ಪ್ರಚೋದನೆಯನ್ನು ನಡೆಸಿ, ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಅವರಿಬ್ಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕು ಮುಸ್ಲಿಂ ಒಕ್ಕೂಟ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ಮತ್ತು ಡಿವೈಎಸ್‌ಪಿಗೆ ಎ.2ರಂದು ದೂರು ನೀಡಿದ್ದಾರೆ. ಅನುಮತಿ ಪಡೆಯದೆಯೇ ಪ್ರತಿಭಟನೆ ನಡೆಸಿದ್ದಲ್ಲದೇ ರಸ್ತೆ ಬಂದ್ ಕೂಡಾ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪುತ್ತೂರು ತಾಲೂಕು ಮುಸ್ಲಿಂ ಒಕ್ಕೂಟದ ಸಂಚಾಲಕ ಅಶ್ರಫ್ ಕಲ್ಲೇಗರವರ ನೇತೃತ್ವದ ನಿಯೋಗದಲ್ಲಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಇಬ್ರಾಹಿಂ ಸಾಗರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here