ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

0

ಪುತ್ತೂರು : ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 


ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ(38ವ.) ಮತ್ತು ಜಯ(38ವ.) ಎಂಬವರು ಬಂಧಿತ ಆರೋಪಿಗಳು. ನ್ಯಾಯಾಲಯವು ಆರೋಪಿಗಳಿಗೆ ಜು.15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳು ತಮ್ಮ ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವು ಸತ್ತಿರುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಕೆ.ದಿನೇಶ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರ್ಯಪ್ಪರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಎಸ್.ಎನ್. ಅರಣ್ಯ ರಕ್ಷಕರುಗಳಾದ ದೀಪಕ, ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here