ಪುತ್ತೂರು: ದ.ಕ.ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದ.ಕ.ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಘಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಜುಲೈ 6ರಂದೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ