ವಿಪರೀತ ಮಳೆ ಹಿನ್ನೆಲೆ: ಜು.7ರಂದು ಕೂಡ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

0

 

ಪುತ್ತೂರು: ದ.ಕ. ಜಿಲ್ಲೆಯಾದ್ಯಂತ ಕಳೆದ 4 ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದ.ಕ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಘಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌, ಐಟಿಐ ಸೇರಿದಂತೆ ಸರಕಾರಿ ಅನುದಾನಿತ ಮತ್ತು ಖಾಸಾಗಿ ವಿದ್ಯಾಸಂಸ್ಥೆಗಳಿಗೆ ಜುಲೈ 7ರಂದೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here