ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

0

ಪುತ್ತೂರು: ಯಕ್ಷಗಾನ ಕಲಾವಿದ ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ (73ವ) ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಜು.06 ರಂದು ರಾತ್ರಿ ಬೆಳ್ಳಾರೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆಯವರ ನಾಲ್ವರು ಮಕ್ಕಳಲ್ಲಿ ಒಬ್ಬರಾದ ವಿಶ್ವನಾಥ ರೈಯವರು 28-2-1949 ರಲ್ಲಿ
ಬೆಳ್ಳಾರೆಯಲ್ಲಿ ಜನಿಸಿದರು. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು. ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ ಚಿನ್ನದ ಉಂಗುರದ ಸನ್ಮಾನ ಸ್ವೀಕರಿಸಿದ್ದಾರೆ.

ಕರ್ನಾಟಕ ಮೇಳ ಒಂದರಲ್ಲೇ 35 ವರುಷಗಳ ತಿರುಗಾಟ ಮಾಡಿರುವ ವಿಶ್ವನಾಥ ರೈಯವರು, ಮಧೂರು ಮೇಳ, ಸುರತ್ಕಲ್ ಮೇಳ, ಕದ್ರಿ ಮೇಳ, ಬಪ್ಪನಾಡು, ಕುಂಟಾರು ಮೇಳ, ಎಡನೀರು , ಕಟೀಲು ಮೇಳಗಳಲ್ಲಿ ತಿರುಗಾಟ ಮಾಡಿದ್ದಾರೆ.

ಮೃತರು ಪತ್ನಿ ಕುಸುಮಾವತಿ, ಪುತ್ರರಾದ ಮಧುಚಂದ್ರ, ರವಿಚಂದ್ರ, ಪುತ್ರಿ ಚಂದ್ರಮತಿ(ಮಮತ), ಸೊಸೆಯಂದಿರಾದ ಆಶಾ ಎಂ, ಪ್ರಿಯ, ಅಳಿಯ ರಾಜೇಶ್ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here