ಸಂಪಾಜೆ ದರೋಡೆ ಪ್ರಕರಣ: ಆರೋಪಿಗೆ ಜಾಮೀನು

0

ಪುತ್ತೂರು:ಮಾ.20ರಂದು ಸಂಪಾಜೆಯ ಮನೆಯೊಂದರಲ್ಲಿ ನಡೆದಿದ್ದ ದರೋಡೆ ಪ್ರಕರಣದ ಓರ್ವ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸಂಪಾಜೆ ಗ್ರಾಮದ ಚಟ್ಟೆಕಲ್ಲು ಎಂಬಲ್ಲಿ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದನ್ನು ದರೋಡೆ ಮಾಡಿದ್ದರು. ಬಳಿಕ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಲ್ಲಿ ತಮಿಳುನಾಡಿನ ರಾಘವನ್ ಯಾನೆ ಕರಣ್ ಎಂಬಾತನನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು ವಾದಿಸಿದ್ದರು.

LEAVE A REPLY

Please enter your comment!
Please enter your name here