ಪುತ್ತೂರು : 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಕ್ರಿಯ ನಂದಿನಿ ಅಧಿಕೃತ ಡೀಲರುಗಳ ಮಕ್ಕಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವತಿಯಿಂದ ಪುರಸ್ಕರಿಸಲಾಗುವುದು. ಆದುದರಿಂದ 2021-22ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಡೀಲರುಗಳ ಮಕ್ಕಳ ಅಂಕಪಟ್ಟಿಯನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ನಿಗದಿತ ನಮೂನೆಯನ್ನು ಜು.13ರೊಳಗೆ ವ್ಯವಸ್ಥಾಪಕರು ಮಾರುಕಟ್ಟೆ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಕುಲಶೇಖರ, ಮಂಗಳೂರು-575005 ಇಲ್ಲಿಗೆ ಕಳುಹಿಸಿಕೊಡಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.