ಮುಂದುವರಿದ ವರುಣನ ಆರ್ಭಟ: ಜು.8-9 ಶಾಲಾ ಕಾಲೇಜುಗಳಿಗೆ ರಜೆ

0

ಪುತ್ತೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಸೇರಿದಂತೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 8 ಮತ್ತು 9ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here