ಜು.9: ರಾಮಕುಂಜ ವಿದ್ಯಾಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧೀನದಲ್ಲಿರುವ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳಲ್ಲಿ ಜು.9ರಂದು ಬೆಳಗ್ಗಿನಿಂದ ಸಂಜೆ ತನಕ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಪದವಿ ಕಾಲೇಜು ವಾರ್ಷಿಕೋತ್ಸವ:

ಬೆಳಿಗ್ಗೆ 9.30ಕ್ಕೆ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಉಪ್ಪಿನಂಗಡಿ ರಾಜ್ ಗ್ರೂಪ್ಸ್‌ನ ಕೃಷ್ಣರಾಜ ಬಿ., ಅಂಚೆ ಇಲಾಖೆಯ ನೆಟ್ಟಣ ಶಾಖೆಯ ಅಂಚೆಪಾಲಕ ಸುಂದರ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಜ್ಞಾನ ವನ ಉದ್ಘಾಟನೆ:

ಬೆಳಿಗ್ಗೆ 11 ಗಂಟೆಗೆ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಆವರಣದಲ್ಲಿ ಬೆಂಗಳೂರಿನ ಶ್ರೀ ಖಿಂಚಾ & ಖಾರಿವಾಲ್ ಫ್ಯಾಮಿಲೀಸ್ ಕ್ಯಾಪ್ಸ್ ಫೌಂಡೇಶನ್‌ನವರು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಿರ್ಮಿಸಿರುವ ಹೊರಾಂಗಣ ವೈಜ್ಞಾನಿಕ ಪ್ರಯೋಗಗಳ ಅಪರೂಪದ ಯೋಜನೆ ’ವಿಜ್ಞಾನ ವನ’ ಉದ್ಘಾಟನೆ ಹಾಗೂ ಬಳಿಕ ಪ.ಪೂ.ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ, ಪ್ರತಿಭಾ ಪುರಸ್ಕಾರ:

ಮಧ್ಯಾಹ್ನ 1.30ಕ್ಕೆ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನ ಉದ್ಘಾಟನೆ ನಡೆಯಲಿದೆ. ಬಳಿಕ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಸಚಿವ ಎಸ್.ಅಂಗಾರರವರು ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇಲ್ಲಿನ ಉಪನಿರ್ದೇಶಕ(ಆಡಳಿತ) ಸುಧಾಕರ್, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here