ದುರ್ಘಟನೆಗಳು ಹೆಚ್ಚುತ್ತಿರುವ ಪ್ರಸಕ್ತ ಸಮಯದಲ್ಲಿ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ-ರಫೀಕ್ ಫೈಝಿ ಮಾಡನ್ನೂರು

0

ಪುತ್ತೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ವಿವಿಧ ರೀತಿಯ ಅನಾಹುತಗಳಿಗೆ ಬಲಿಯಾಗುತ್ತಿದ್ದು ಮಕ್ಕಳ ಮರಣ ಸಂಖ್ಯೆಯೂ ಹೆಚ್ಚುತ್ತಿದೆ. ವಿವಿಧ ಅವಘಡಗಳು ಹೆಚ್ಚುತ್ತಿರುವ ಪ್ರಸಕ್ತ ಸಮಯದಲ್ಲಿ ಮಕ್ಕಳ ಬಗ್ಗೆ ಪೋಷಕರು ವಿಶೇಷ ಕಾಳಜಿ ಮತ್ತು ನಿಗಾ ವಹಿಸುವುದು ಅತ್ಯಗತ್ಯವಾಗಿದೆ ಎಂದು ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ರಫೀಕ್ ಫೈಝಿ ಮಾಡನ್ನೂರು ಹೇಳಿದರು.

ಜು.7ರಂದು ರಾತ್ರಿ ರೆಂಜಲಾಡಿ ಮಸೀದಿಯಲ್ಲಿ ನಡೆದ ದಿಕ್ರ್ ಹಲ್ಕಾ ಮಜ್ಲಿಸ್ ಬಳಿಕ ಅವರು ವಿಶೇಷ ಉಪನ್ಯಾಸ ನೀಡಿದರು. ವಿದ್ಯುತ್ ಅವಘಡ, ನೀರಿನ ಅವಘಡಗಳಿಗೆ ಮಕ್ಕಳು ಈಡಾಗುತ್ತಿರುವ ಪ್ರಸಂಗಗಳು ನಡೆಯುತ್ತಿದ್ದು ಪ್ರಸ್ತುತ ಪ್ರಾಕೃತಿಕ ವಿಕೋಪ ಸಂದರ್ಭ ಮಕ್ಕಳ ಬಗ್ಗೆ ಇನ್ನಷ್ಟು ಜಾಗರೂಕತೆ ವಹಿಸಬೇಕಾದ ಅಗತ್ಯವಿದ್ದು ಮಕ್ಕಳನ್ನು ಆಟವಾಡಲು ಹೆಚ್ಚು ಹೊರಗಡೆ ಕಳುಹಿಸದೆ ಅವರ ಸುರಕ್ಷತೆ ಬಗ್ಗೆ ಪೋಷಕರು ನಿಗಾ ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ರೆಂಜಲಾಡಿ ಮಸೀದಿಯ ಅಧ್ಯಕ್ಷ ಇಬ್ರಾಹಿಂ ಕಡ್ಯ, ಪ್ರ.ಕಾರ್ಯದರ್ಶಿ ಝೈನುದ್ದೀನ್ ಜೆ.ಎಸ್ ಹಾಗೂ ಜಮಾಅತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here