ಕಡಬ: ಆಟೋ ರಿಕ್ಷಾ ಹಾಗೂ ಟಾಟಾ ಏಸ್ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಕುಂತೂರು ಸಮೀಪದ ಎರ್ಮಾಳ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದ ಟಾಟಾ ಏಸ್ ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ನಡೆವೆ ಈ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.