ಬಿಎಸ್‌ಎನ್‌ಎಲ್‌ನ ನಿವೃತ್ತ ಉದ್ಯೋಗಿ, ಬಹುಜನ ಚಳುವಳಿಯ ಹಿರಿಯ ನಾಯಕ ಪಿ. ಡೀಕಯ್ಯ ನಿಧನ

0

ಪುತ್ತೂರು: ಬಿಎಸ್‌ಎನ್‌ಎಲ್‌ನ ನಿವೃತ್ತ ಉದ್ಯೋಗಿ, ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್‌ವಾದಿ ಬೆಳ್ತಂಗಡಿಯ ಪದ್ಮುಂಜ ನಿವಾಸಿ ಪಿ. ಡೀಕಯ್ಯ(63ವ.)ರವರು ಮೆದುಳಿನ ರಕ್ತಸ್ರಾವದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಿಎಸ್‌ಎನ್‌ಎಲ್‌ನ ಉಪ್ಪಿನಂಗಡಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಡೀಕಯ್ಯರವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸಿ ಅವರು ಚಳವಳಿಯನ್ನು ಕಟ್ಟಿದವರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಬಹುಜನ ಚಳವಳಿಯನ್ನು ಕಟ್ಟಿದ್ದ ಅವರು ಸಾಕಷ್ಟು ಯುವ ನಾಯಕರನ್ನು ಸೃಷ್ಟಿಸಿದ್ದರು. ಕಾನದ ಕಟದರ ಇತಿಹಾಸದ ಕುರಿತು ಅಧ್ಯಯನ ಮಾಡಿ ಪುಸ್ತಕ ಬರೆದಿದ್ದ, ಡೀಕಯ್ಯರು ಅಪ್ರತಿಮ ಬರಹಗಾರರು ಕೂಡ ಆಗಿದ್ದರು. ಅವರ ಬರಹಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಮೃತರು ಪತ್ನಿ ಹಿರಿಯ ಸಾಹಿತಿ ಅತ್ರಾಡಿ ಅಮೃತಾ ಶೆಟ್ಟಿಯವರನ್ನು ಅಗಲಿದ್ದಾರೆ.

ಅಂಗಾಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡೀಕಯ್ಯನವರ ಕುಟುಂಬಸ್ಥರು ಅವರ ಅಂಗಾಂಗಗಳನ್ನು ದಾನ ಮಾಡಿ ಹಲವರ ಬದುಕಿಗೆ ದಾರಿ ತೋರಿದ್ದಾರೆ. ಅವರ ಅಂಗಾಂಗಗಳ ದಾನದ ಪ್ರಕ್ರಿಯೆಗಳು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಡೆಯುತ್ತಿದೆ.

LEAVE A REPLY

Please enter your comment!
Please enter your name here