ಅಮರನಾಥ ಯಾತ್ರೆಗೆ ತೆರಳಿರುವವರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ-ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077ಕ್ಕೆ ಕರೆ ಮಾಡಿ

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯಿಂದ ಪವಿತ್ರ ಕ್ಷೇತ್ರವಾದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಫೋಟದ ಪ್ರವಾಹಕ್ಕೆ ಸಿಲುಕಿರುವ ಅಥವಾ ಸುರಕ್ಷಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಅವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ ೧೦೭೭ ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ವಿವರ ಅಥವಾ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.

ಪವಿತ್ರ ಕ್ಷೇತ್ರವಾದ ಅಮರನಾಥ ಗುಹೆ ಬಳಿಯೇ ಜು.೮ರಂದು ಸಂಜೆ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆ ಮಾರ್ಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ, ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಧಿಡೀರನೇ ಜೋರಾಗಿ ನೀರು ಹರಿದು ಬಂದಿದ್ದರಿಂದ ಯಾತ್ರೆಯ ಮಾರ್ಗದಲ್ಲಿ ಯಾತ್ರಾರ್ಥಿಗಳು ತಂಗಲು ನಿರ್ಮಿಸಿದ್ದ ಟೆಂಟ್‌ಗಳು ಪ್ರವಾಹದ ನೀರಿನ ಹೊಡೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿವೆ. ಈ ಟೆಂಟ್ ಗಳಲ್ಲಿದ್ದ 16 ಯಾತ್ರಾರ್ಥಿಗಳು ಪ್ರವಾಹದ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆಂದು ವರದಿಯಾಗಿರುತ್ತದೆ. ಮೇಘಸ್ಫೋಟದ ಅನಾಹುತ ಬಳಿಕ ಅಮರನಾಥ ಯಾತ್ರೆಯನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here