ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಿಂದ ಪಿಯುಸಿ ಸಾಧಕರಿಗೆ ಜಿ.ಎಲ್ ಮೆರಿಟೋರಿಯಸ್ ಸ್ಟೂಡೆಂಟ್ ಅವಾರ್ಡ್

0
  • ಜ್ಞಾನ ವಿಸ್ತರಿಸಿ, ಸಾಮರ್ಥ್ಯ ಹೆಚ್ಚಿಸಿ, ಹೊಸತನ ಚಿಂತಿಸಿ – ಡಾ| ವರದರಾಜ್ ಚಂದ್ರಗಿರಿ
  • ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ ಕಾರ್ಯಕ್ರಮ ಆಯೋಜಿಸಿದ್ದೇವೆ- ಜಿ.ಎಲ್ ಬಲರಾಮ ಆಚಾರ್ಯ
  • ವಿದ್ಯಾರ್ಥಿಗಳ ಸಾಧನೆ ಗುರುತಿಸುವುದು ಅಗತ್ಯ -ಡಾ| ಮಹೇಶ್ ಪ್ರಸನ್ನ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿ.ಎಲ್ ಮೆರಿಟೋರಿಯಲ್ ಸ್ಟೂಡೆಂಟ್ ಅವಾರ್ಡ್ ಪ್ರದಾನ ಕಾರ್ಯಕ್ರಮ ಜು.9ರಂದು ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಅಂಬಿಕಾ ಪದವಿ ಪೂರ್ವ ವಿದ್ಯಾಲಯ, ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು, ನರೇಂದ್ರ ಪದವಿ ಪೂರ್ವ ಕಾಲೇಜು, ಸಂತಪಿಲೋಮಿನಾ ಕಾಲೇಜು, ವಿವೇಕಾನಂದ ಪದವಿ ಪೂರ್ವ ಕಾಲೇಜು, ಪದವಿ ಪೂರ್ವ ಕಾಲೇಜುಗಳಲ್ಲಿ 2021-22ನೇ ಸಾಲಿನ ವಿಜ್ಞಾನ, ‌ವಾಣಿಜ್ಯ ಹಾಗೂ ಕಲಾ‌ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪದಕ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲ ವರದರಾಜ ಚಂದ್ರಗಿರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದಿಕ್ಸೂಚಿ ಬಾಷಣ ಮಾಡಿ ವಿದ್ಯಾರ್ಥಿಗಳು ಜ್ಞಾನದ ದಿಗಂತವನ್ನು ವಿಸ್ತರಿಸಿ, ಸಾಮರ್ಥ್ಯ ಹೆಚ್ಚಿಸಿ, ಸದಾ ಹೊಸತನಕ್ಕೆ ಚಿಂತಿಸುವ ಮೂರು ಅಂಶಗಳನ್ನು ನೆನಪಿನಲ್ಲಿ ಇಟ್ಟು ಕೊಳ್ಳಿ ಎಂದರು. ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗ ಅದನ್ನು ಯಶಸ್ವಿಯಾಗಿ ಎದುರಿಸಲು ನಿಮಗೆ ಪ್ರೇರಣೆ ಕೊಡುವ ಕೆಲಸವನ್ನು ಜಿ.ಎಲ್ ಆಚಾರ್ಯ ಜ್ಯುವೆಲ್ಸ್ ಸಂಸ್ಥೆ ಮಾಡುತ್ತಿದೆ ಎಂದರು.

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ| ಮಹೇಶ್ ಪ್ರಸನ್ನ ಅಧ್ಯಕ್ಷತೆ ವಹಿಸಿದರು. ಜಿ.ಎಲ್ ಬಲರಾಮ ಆಚಾರ್ಯ ಸ್ವಾಗತಿಸಿ, ನಿವೃತ್ತ ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೇಣುಗೋಪಾಲ್ ಪ್ರಾರ್ಥಿಸಿದರು. ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಲಕ್ಷ್ಮೀಕಾಂತ್ ಆಚಾರ್ಯ ವಂದಿಸಿದರು. ಸುದನ್ವ ಆಚಾರ್ಯ ವಿವಿಧ ಕಾರ್‍ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here