ಮಂಗಳೂರು: ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು ಜು.11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಹಾಗೂ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪಿಯು, ಪದವಿ ಹಾಗೂ ಇತರ ವೃತ್ತಿಪರ ಸಂಸ್ಥೆಗಳಲ್ಲಿ ತರಗತಿಗಳು ನಡೆಯಲಿದೆ.