ಮುದ್ಯ: ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟಗಳ ಪದಗ್ರಹಣ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಇದರ ಉಪ್ಪಿನಂಗಡಿ ವಲಯ ವ್ಯಾಪ್ತಿಗೆ ಒಳಪಟ್ಟ ವಳಾಲು, ಬಜತ್ತೂರು, ಕಾಂಚನ ಹಾಗೂ ಕೆಮ್ಮಾರ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ನೂತನ ಒಕ್ಕೂಟ ಉದ್ಘಾಟನೆ ಜು.9ರಂದು ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪುತ್ತೂರು ತಾಲೂಕು ಘಟಕದ ಗೌರವಾಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಉದ್ಘಾಟಿಸಿದರು. ಬಜತ್ತೂರು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕರಾವಳಿ ವ್ಯಾಪ್ತಿ ಪ್ರಾದೇಶಿಕ ಕಚೇರಿ ಉಡುಪಿಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್‌ರವರು ಗ್ರಾಮಾಭಿವೃದ್ಧಿ ಯೋಜನೆಯು ನಡೆದು ಬಂದ ಹಾದಿ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷ ಮಹಾಬಲ ರೈ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಶ್ರೀಧರ ಗೌಡ ನಡ್ಪ, ಮುದ್ಯ ಶ್ರೀ ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಸೋಮಸುಂದರ್, ಊರಿನ ಹಿರಿಯರಾದ ದಾಮೋದರ ಗೌಡ, ಒಕ್ಕೂಟಗಳ ಉಪ್ಪಿನಂಗಡಿ ವಲಯಾಧ್ಯಕ್ಷ ಪ್ರಶಾಂತ್ ಪೆರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ-೨ ಇದರ ನಿರ್ದೇಶಕ ಪ್ರವೀಣ್ ಕುಮಾರ್‌ರವರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಚಂದ್ರಶೇಖರ್ ಸ್ವಾಗತಿಸಿ, ಕಾಂಚನ ಒಕ್ಕೂಟದ ನಿಕಟಪೂರ್ವ ಕಾರ್ಯದರ್ಶಿ ಜಯ ವಂದಿಸಿದರು. ನಾರಾಯಣ ಗೌಡ ಕೆಳಗಿನ ಮನೆ ಕಾರ್ಯಕ್ರಮ ನಿರೂಪಿಸಿದರು. ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷರು, ಭಜನಾ ಮಂಡಳಿಗಳ ಅಧ್ಯಕ್ಷರುಗಳು,ಪ್ರಗತಿಬಂಧು-ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

[box type=”note” bg=”#” color=”#” border=”#” radius=”10″]ಅಧಿಕಾರ ಹಸ್ತಾಂತರ:

ಒಕ್ಕೂಟದ ನಿಕಟಪೂರ್ವ ಪದಾಧಿಕಾರಿಗಳು ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಗ್ರಾಮೀಣ ಸಂಸ್ಕೃತಿಯ ಪ್ರತೀಕವಾದ ವೀಳ್ಯ ಹಸ್ತಾಂತರಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ಬಿಟ್ಟುಕೊಟ್ಟರು.[/box]

LEAVE A REPLY

Please enter your comment!
Please enter your name here