ರಾಮಕುಂಜ: ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ, ಪ್ರತಿಭಾ ಪುರಸ್ಕಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನ ಉದ್ಘಾಟನೆ ಹಾಗೂ 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜು.9ರಂದು ಮಧ್ಯಾಹ್ನ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದರು. ಬಳಿಕ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ಹೆಮ್ಮೆ ತಂದಿದೆ. ಮುಂದಿನ ದಿನದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳೂ ಸಾಧಕರಾಗಬೇಕು. ಹೆತ್ತವರ ಸಹಕಾರ, ಶಿಕ್ಷಕರ ಪರಿಪೂರ್ಣ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸಿಗಬೇಕೆಂದು ಹೇಳಿದರು. ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯು ಸುಸಂಸ್ಕೃತ ನಾಗರಿಕರನ್ನು ಸೃಷ್ಟಿಸುವ ದೊಡ್ಡ ಸಂಸ್ಥೆಯಾಗಿ ಬೆಳೆಯಲಿ ಎಂದು ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹಾರೈಸಿದರು.


ಮುಖ್ಯ ಅತಿಥಿಯಾಗಿದ್ದ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಮಾತನಾಡಿ, ಅಟಲ್ ಟಿಂಕರಿಂಗ್ ಲ್ಯಾಬ್‌ನಿಂದ ಸಿಗುವ ಎಲ್ಲಾ ಪ್ರಯೋಜನಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡು ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಸಾಧನೆ ತೋರಬೇಕೆಂದು ಹೇಳಿದ ಅವರು, ರಾಮಕುಂಜದಲ್ಲಿ ಬಿಸಿಎಂ ಹಾಸ್ಟೆಲ್ ಆರಂಭಕ್ಕೆ ಪ್ರಯತ್ನಿಸಲಾಗುವುದು. ರಾಮಕುಂಜ ಪದವಿ ಕಾಲೇಜಿನ ರಂಗಮಂದಿರಕ್ಕೆ ಹಾಗೂ ಪ.ಪೂ.ಕಾಲೇಜಿನಲ್ಲಿ ಸುಸಜ್ಜಿತ ಸಭಾಂಗಣ ನಿರ್ಮಾಣಕ್ಕೆ ಆಡಳಿತ ಮಂಡಳಿಯವರ ಕೋರಿಕೆಯಂತೆ ಅನುದಾನ ನೀಡುವುದಾಗಿ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ(ಆಡಳಿತ) ಸುಧಾಕರ್, ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್ ಪ್ರಮೋದ್, ಯುಎಇ ಬಿಹೆಚ್‌ಇ ಗ್ರೂಪ್‌ನ ಡಾ.ಕನಕರಾಜ್‌ರವರು ಸಂದರ್ಭೋಚಿತವಾಗಿ ಮಾತನಾಡಿದರು.


ಅಟಲ್ ಟಿಂಕರಿಂಗ್ ಲ್ಯಾಬ್‌ನ ಉಸ್ತುವಾರಿ ರಿಯಾಜ್ ಬೆಂಗಳೂರು, ಎಸ್‌ಆರ್‌ಕೆ ಲ್ಯಾಡರ್‍ಸ್‌ನ ಕೇಶವ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ಸದಸ್ಯರಾದ ಲಕ್ಷ್ಮೀನಾರಾಯಣ ರಾವ್ ಆತೂರು, ಮಾಧವ ಆಚಾರ್ ಇಜ್ಜಾವು, ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ರ್‍ಯಾಂಕ್ ಪಡೆದುಕೊಂಡ ಸಂಸ್ಥೆಯ ವಿದ್ಯಾರ್ಥಿ ಜೀವನ್, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ೫ನೇ ರ್‍ಯಾಂಕ್ ಪಡೆದುಕೊಂಡ ಶ್ರೀರಕ್ಷಾ, ೯ನೇ ರ್‍ಯಾಂಕ್ ಪಡೆದುಕೊಂಡ ಶ್ರೇಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ.,ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಸತೀಶ್ ಭಟ್ ವಂದಿಸಿದರು. ಪ್ರೌಢಶಾಲಾ ಶಿಕ್ಷಕಿ ಸುಪ್ರಿತ ನಿರೂಪಿಸಿದರು.


ಗೌರವಾರ್ಪಣೆ:
ಅಟಲ್ ಟಿಂಕರಿಂಗ್ ಲ್ಯಾಬ್ ಸ್ಥಾಪನೆಗೆ ಸಹಕಾರ ನೀಡಿದ ನವೀನ್, ಮಣಿಕಂಠನ್, ರಿಯಾಜ್ ಬೆಂಗಳೂರು, ಪಿಡಬ್ಲ್ಯುಡಿ ಇಂಜಿನಿಯರ್ ಪ್ರಮೋದ್, ಎಸ್‌ಆರ್‌ಕೆಯ ಕೇಶವ, ಡಾ.ಕನಕರಾಜುರವರಿಗೆ ಸ್ವಾಮೀಜಿ ಗೌರವಾರ್ಪಣೆ ಮಾಡಿದರು. ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಎನ್‌ಎಮ್‌ಎಮ್‌ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಿಕ್ಷಕರಾದ ದಿನೇಶ್,ವೆಂಕಟೇಶ್ ದಾಮ್ಳೆ, ಉಪನ್ಯಾಸಕಿ ಭಾರತಿ ವಿದ್ಯಾರ್ಥಿಗಳ ಹೆಸರು ವಾಚಿಸಿದರು.

LEAVE A REPLY

Please enter your comment!
Please enter your name here