ಆಸ್ಪತ್ರೆ, ಲಾಡ್ಜ್‌ನ ಜನರೇಟರ್ ಬ್ಯಾಟರಿ ಕಳವು: ಬಂಧನ

0

ಪುತ್ತೂರು: ಪುತ್ತೂರಿನ ಖಾಸಗಿ ಆಸ್ಪತ್ರೆ ಮತ್ತು ಲಾಡ್ಜ್‌ವೊಂದರ ಜನರೇಟರ್ ಬ್ಯಾಟರಿ ಕಳವು ಮಾಡಿದ ಆರೋಪಿಯನ್ನು ಕೇರಳದಿಂದ ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಪುತ್ತೂರು ದರ್ಬೆಯಲ್ಲಿರುವ ಹಿತ ಆಸ್ಪತ್ರೆ ಮತ್ತು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಶ್ರೀ ಸಾಯಿ ಲಾಡ್ಜ್‌ನಿಂದ ಜನರೇಟರ್ ಕಳವು ಮಾಡಲಾಗಿತ್ತು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು, ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಇಟ್ಟಿ ಪನ್ನಿಕರ್ ಎಂಬವರನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಬಂಽತ ಆರೋಪಿಯಿಂದ ಕಳವಾದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಉಪಾಽಕ್ಷಕರವರ ನಿರ್ದೆಶನದಂತೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ಮಾರ್ಗದರ್ಶನದಲ್ಲಿ ಎಸ್.ಐ. ರಾಜೇಶ್ ಕೆ.ವಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಸ್ಕರಿಯಾ, ಜಗದೀಶ್, ಸುಬ್ರಮಣ್ಯ, ಕಿರಣ ಕುಮಾರ್ ಕಾರ್ಯಾಚರಣೆ ನಡೆಸಿದ್ದರು.

LEAVE A REPLY

Please enter your comment!
Please enter your name here