ಮಾಣಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು-ಆರೋಪಿ ವೈದ್ಯನ ಬಂಧನ

0

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಽಸಿದಂತೆ ವಿಟ್ಲ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ವೈದ್ಯರೋರ್ವರನ್ನು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ನಿವಾಸಿ ಡಾ. ಬಿ.ಎಸ್. ನಾಯ್ಕ್ ರವರ ಪುತ್ರ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿರುವ ಡಾ. ಅನುಷ್ ನಾಯ್ಕ(35 ವ.) ಬಂಧಿತ ಆರೋಪಿಯಾಗಿದ್ದಾರೆ. 14 ವರ್ಷದ ಬಾಲಕಿ ಮೇಲೆ ವೈದ್ಯ ಅನುಷ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2021ರ ಮಾರ್ಚ್ 6ರಂದು ಮಾಣಿ ಗ್ರಾಮದ ಮಾಣಿ ಸರಕಾರಿ ಆಸ್ಪತ್ರೆಯ ಬಳಿಯಲ್ಲಿ ಕಾಣ ಸಿಕ್ಕಿದ ಆರೋಪಿ ಡಾ.ಅನುಷ್ ನಾಯ್ಕ ಸಂತ್ರಸ್ತೆಯನ್ನು ಪ್ರೀತಿ ಮಾಡುವಂತೆ ತಿಳಿಸಿದ್ದರು. ಅದರಂತೆ ಸ್ವಲ್ಪ ಸಮಯದ ನಂತರ, ಆರೋಪಿಯು ಆತನ ಕಾರಿನಲ್ಲಿ ಸಂತ್ರಸ್ತೆಯನ್ನು ಮಾಣಿ ಗ್ರಾಮದ ಮನೆಯ ಕಡೆಗೆ ಕರೆದುಕೊಂಡು ಹೋಗಿ ಬಾಲಕಿಯ ಮೈಗೆ ಕೈ ಹಾಕಿ ಲೈಂಗಿಕ ತೊಂದರೆ ನೀಡಿರುತ್ತಾರೆ. ಮಾತ್ರವಲ್ಲದೆ ಈ ವಿಚಾರ ಯಾರಲ್ಲಾದರೂ ತಿಳಿಸಿದರೆ ನಿನ್ನನ್ನು ಹಾಗೂ ನಿನ್ನ ತಂದೆ-ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಅಪ್ರಾಪ್ತ ಬಾಲಕಿಯ ತಾಯಿ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಽಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

LEAVE A REPLY

Please enter your comment!
Please enter your name here