ವಿದ್ಯಾಸಂಸ್ಥೆ ಪ್ರಾರಂಭಿಸುವ ಯೋಜನೆಗೆ ಎಲ್ಲರ ಸಹಕಾರ ಅಗತ್ಯ;  ಪುತ್ತೂರು ಬಿಲ್ಲವ ಸಂಘದ 46ನೇ ಮಹಾಸಭೆಯಲ್ಲಿ ಸತೀಶ್ ಕೆಡೆಂಜಿ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ 46ನೇ ಮಹಾಸಭೆ ಜುಲೈ 10ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆ ವಹಿಸಿದ್ದ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಮುಂದಿನ ದಿನಗಳಲ್ಲಿ ಬಿಲ್ಲವ ಸಂಘದ ವತಿಯಿಂದ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸುವ ಯೋಜನೆ ಇದೆ. ಇದಕ್ಕಾಗಿ ಮತ್ತು ಸಂಘದ ಮುಂದಿನ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಭಾಂಧವರಿಂದ ಎಲ್ಲಾ ರೀತಿಯ ಸಹಕಾರ ಅಗತ್ಯ ಎಂದರು.

ಜತೆಕಾರ್ಯದರ್ಶಿ ಚಿದಾನಂದ ಸುವರ್ಣ ಉಪಸ್ಥಿತರಿದ್ದರು. ಸಭೆಯಲ್ಲಿ ಸಂಘದ ಹಿರಿಯ ಸದಸ್ಯ ಆನಂದ ಟೈಲರ್, ಮಾಜಿ ಅಧ್ಯಕ್ಷರಾದ ಬಾಳಪ್ಪ ಪೂಜಾರಿ ಕೇಪುಳು, ಕೆ.ಪಿ. ದಿವಾಕರ, ವಿಜಯ ಕುಮಾರ್ ಸೊರಕೆ, ಮಹಿಳಾ ವೇದಿಕೆ ಯುವವಾಹಿನಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಬಿಲ್ಲವ ಸಂಘದ ಮಾಜಿ ಪದಾಧಿಕಾರಿಗಳು ಮತ್ತು ಸದಸ್ಯರು, ವಿವಿಧ ಗ್ರಾಮ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ವಲಯ ಸಂಚಾಲಕರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಗುರುಮಂದಿರದ ಅರ್ಚಕ ಅಕ್ಷತ್ ಶಾಂತಿ ಪ್ರಾರ್ಥಿಸಿ, ಉಪಾಧ್ಯಕ್ಷ ಡಾ. ಸದಾನಂದ ಕುಂದರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಾಗೇಶ್ ಬಲ್ನಾಡು ವಾರ್ಷಿಕ ವರದಿ ಮಂಡಿಸಿದರು. ಇದೇ ಸಂದರ್ಭ 2022-23ನೇ ಸಾಲಿನ ಆಯ-ವ್ಯಯ ಬಜೆಟನ್ನು ಮಂಡಿಸಿ, ಅನುಮೋದನೆ ಪಡೆದುಕೊಳ್ಳಲಾಯಿತು. ಕೋಶಾಧಿಕಾರಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ ಗುರುಮಂದಿರದ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷೆ ಚಂದ್ರಕಲಾ ಮುಕ್ವೆ ವಂದಿಸಿದರು.

LEAVE A REPLY

Please enter your comment!
Please enter your name here