ಫಿಲೋಮಿನಾ ಪ್ರೌಢಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

0

ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯ ಶಿಕ್ಷಣಕ್ಕಿದೆ-ವಂ|ಲಾರೆನ್ಸ್ ಮಸ್ಕರೇನ್ಹಸ್

ಪುತ್ತೂರು: ಒಳ್ಳೆಯ ಗುಣ, ನಡತೆ ಹಾಗೂ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ತಮ್ಮ ಹೆತ್ತವರಿಂದ ಕಲಿಯುತ್ತಾರೆ. ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯವು ಶಿಕ್ಷಣದಿಂದ ದೊರಕುವಂತಾಗಬೇಕು ಎಂದು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಹೇಳಿದರು.

ಅವರು ಜು.9 ರಂದು ದರ್ಬೆ ಫಿಲೋನಗರದಲ್ಲಿನ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪ್ರೌಢಶಾಲೆಯ 2022-23ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೋಷಕರು ಮಕ್ಕಳ ಬೆಳವಣಿಗೆಗೆ ಪೂರಕವಾಗಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಜವಾಬ್ದಾರಿ ಅತೀ ಮುಖ್ಯ ಎಂದರು.

ರಕ್ಷಕ-ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ ಕೆ.ರವರು ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಗೆ ಶಿಕ್ಷಕರ ಜೊತೆಗೆ ಹೆತ್ತವರ ಸಹಕಾರವೂ ಅತೀ ಮುಖ್ಯ ಎಂದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕಾರ್ಮಿನ್ ಪಾಸ್ ಸ್ವಾಗತಿಸಿ, ಶಾಲೆಯ ಚಟುವಟಿಕೆ ಮತ್ತು ನಿಯಮವನ್ನು ತಿಳಿಸಿದರು. ಶ್ರೀಮತಿ ಮೋಲಿ ಫೆರ್ನಾಂಡೀಸ್ ವರದಿ ಮಂಡಿಸಿದರು. ಶಿಕ್ಷಕಿ ಶ್ರೀಮತಿ ಆಶಾ ರೆಬೆಲ್ಲೊ ಲೆಕ್ಕಪತ್ರ ಮಂಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.

ಪದಾಧಿಕಾರಿಗಳ ಆಯ್ಕೆ…

ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರಾಗಿ ಮೌರಿಸ್ ಕುಟಿನ್ಹಾ ರಾಗಿದಕುಮೇರು, ಕಾರ್ಯದರ್ಶಿಯಾಗಿ ಅಶ್ವಿನಿ ಕೆ, ಕೋಶಾಧಿಕಾರಿಯಾಗಿ ಶಿಕ್ಷಕಿ ಆಶಾ ರೆಬೆಲ್ಲೋ, ಶಿಕ್ಷಕರ ಕಡೆಯಿಂದ ಉಪಾಧ್ಯಕ್ಷರಾಗಿ ಕ್ಲೆಮೆಂಟ್ ಪಿಂಟೊ, ಕಾರ್ಯದರ್ಶಿಯಾಗಿ ಮೋಲಿ ಫೆರ್ನಾಂಡೀಸ್‌ರವರು ಆಯ್ಕೆಯಾದರು.

LEAVE A REPLY

Please enter your comment!
Please enter your name here