ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ನೀಟ್ ಪರೀಕ್ಷೆಯನ್ನು ಮತ್ತೊಮ್ಮೆ ಎದುರಿಸುವವರಿಗಾಗಿ ರಿಪೀಟರ್ಸ್ ಬ್ಯಾಚ್ ತರಗತಿಗಳನ್ನು ಜುಲೈ 18ರಿಂದ ಆರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳ ಸ್ಪಂದನೆ ಹಾಗೂ ಪುತ್ತೂರಿನ ಸುತ್ತಮುತ್ತಲಿನ ವಿದ್ಯಾರ್ಥಿಗಳ ಅವಶ್ಯಕತೆಗಳ ನೆಲೆಯಲ್ಲಿ ಈ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ : 8431285970/ 08251 235688