ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ

0

ಪುತ್ತೂರು;ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯು ಜು.13ರಂದು ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾಗಿರುವ ತಹಶೀಲ್ದಾರ್ ನಿಸರ್ಗಪ್ರಿಯ ದೀಪ ಬೆಳಗಿಸಿ ಪುಷ್ಪಾರ್ಚಣೆ ಮಾಡಿದರು. ಬಳಿಕ ಮಾತನಾಡಿದ ಅವರು, 12ನೇ‌ಶತಮಾನದಲ್ಲಿ‌ ತನ್ನ ವಚನ ಚಳುವಳಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಒಬ್ಬರು. ಇವರು 250ಕ್ಕೂ ಅಧಿಕ ವಚನಗಳನ್ನು ರಚಿಸಿದ್ದರು ಎಂದರು.

ಗ್ರೇಡ್-2 ತಹಶೀಲ್ದಾರ್ ಲೋಕೇಶ್ ಬಿ.ಆರ್.,‌ ಸರ್ವೇ ಸೂಪರ್ ವೈಸರ್ ಮಹೇಶ್,‌ ಸಹಾಯಕ ಆಯುಕ್ತರ ಕಚೇರಿ ವ್ಯವಸ್ಥಾಪಕ ಚಂದ್ರಶೇಖರ್ ಉಪಸ್ಥಿತರಿದ್ದರು. ತಾಲೂಕು ಕಚೇರಿ ದಯಾನಂದ ಸ್ವಾಗತಿಸಿ, ವಂದಿಸಿದರು. ವೀಣಾ ಎಸ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here