ರಾಜ್ಯ ಡಾಡ್ಜ್‌ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ‘ಅಕ್ಷಯಾಭಿನಂದನಾ’ ಕಾರ್ಯಕ್ರಮ

0

 

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಜು.12ರಂದು  ಅಕ್ಷಯಾಭಿನಂದನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಸುದಾನ ವಸತಿ ಶಾಲೆಯ ಸಂಚಾಲಕರಾದ ವಿಜಯ್ ಹಾರ್ವಿನ್‌ರವರು ಉದ್ಘಾಟಿಸಿ, ಭಾರತದ ಮಾನವ ಸಂಪನ್ಮೂಲದ ವೃತ್ತಿಯಲ್ಲಿ ಮುಂದುವರಿಸಲು ಈ ಕಾಲೇಜಿನಲ್ಲಿರುವ ವೃತ್ತಿಪರ ಕೋರ್ಸ್‌ಗಳು ಮಹತ್ವದ ಪಾತ್ರವಹಿಸುತ್ತದೆ ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕ್ರೀಡಾಕ್ಷೇತ್ರದಲ್ಲಿ ಪುತ್ತೂರಿನ ಹಿರಿಮೆಯನ್ನು ಉತ್ತುಂಗಕ್ಕೇರಿಸಿದ ಡಾಡ್ಜ್‌ಬಾಲ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.


ಮುಖ್ಯ ಅತಿಥಿಯಾದ ಶ್ರೀ ಸುರೇಶ್ ಎನ್.ಕೆ ಪ್ರಾಂಶುಪಾಲರು ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟುರವರು ಮಾತನಾಡಿ, ಭಾರತದಲ್ಲಿ ಉಗಮಗೊಂಡ ಚೆಸ್ ಹಾಗೂ ವಿವಿಧ ಆಟೋಟ ಸ್ಪರ್ದೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯಾಗಿ ಬೆಳವಣಿಗೆಯನ್ನು ಕಾಣುತ್ತಿದೆ ಎಂದು ತಿಳಿಸಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.


ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಡಶಾಲೆ, ತೆಂಕಿಲ ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಆಶಾ ಬೆಳ್ಳಾರೆ, ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಸಂದೇಶಗಳನ್ನು ನೀಡುವ ಮೂಲಕ ಮಹೀಳಾ ಸಬಲೀಕರಣದ ಮಹತ್ವದ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಡಾಡ್ಜ್‌ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಪ್ರಶಸ್ತಿ ಪಡೆಯಲು ಮಾರ್ಗದರ್ಶನ ನೀಡಿ ಸಹಕರಿಸಿದ ಶ್ರೀ ವಿಜೇತ್ ಕುಮಾರ್ ದೈಹಿಕ ಶಿಕ್ಷಕರು ಮಂಗಳೂರು ಇವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.


ಸನ್ಮಾನಿತಗೊಂಡ ವಿಜೇತ್ ಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ನಡೆದ ಡಾಡ್ಜ್‌ಬಾಲ್ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಶಿಸ್ತು ಹಾಗೂ ಪರಿಶ್ರಮದ ಬಗ್ಗೆ ಮೆಚ್ಚುಗೆಯ ಮಾತನಾಡಿ, ರಾಜ್ಯ ಡಾಡ್ಜ್‌ಬಾಲ್ ಫೇಡರೇಶನ್ ವತಿಯಿಂದ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲುರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.


ಕಾರ್ಯಕ್ರಮದಲ್ಲಿ ರಾಜ್ಯ ಡಾಡ್ಜ್‌ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಂದ ಗೌರವಿಸಲಾಯಿತು. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ವಿಜೇತರಾದ ಕು. ದೇವಿಕಾರವನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಷಕ್ಷರಾದ ಜಯಂತ್ ನಡುಬೈಲುರವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಮಾರ್ಗದರ್ಶನವಿಲ್ಲದೇ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆಯಲು ಸಹಕರಿಸಿದ ಎಲ್ಲಾ ದೈಹಿಕ ಶಿಕ್ಷಕರಿಗೆ ಧನ್ಯವಾದಗಳನ್ನು ತಿಳಿಸಿ ಮುಂದೆಯು ಹೀಗೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕೆಂದು ಮನವಿಮಾಡಿಕೊಂಡರು.


ಮಂಗಳೂರಿನಲ್ಲಿ ನಡೆದ ಮಿಸ್ ಮಂಗಳೂರು ಫ್ಯಾಶನ್ ಶೋ ಸ್ಪರ್ಧೆಯಲ್ಲಿ ವಿಜೇತರಾದ ಕು.ಪ್ರತೀಕ್ಷಾ. ಪಿ., ಕು. ಆಶಾ ಹಾಗೂ ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿ ರನ್ನರ್‌ಅಪ್ ಸ್ಥಾನ ಪಡೆದ ವಚನ್ ಎಸ್ ಇವರಿಗೂ ಈ ಸಂಧರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ ಸ್ವಾಗತಿಸಿ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ವಂದಿಸಿದರು. ಕು. ರಶ್ಮಿ ಮತ್ತು ಬಳಗ ಪ್ರಾರ್ಥಿಸಿ, ಕಾರ್ಯಕ್ರಮವನ್ನು ಕ್ರೀಡಾ ಸಂಚಾಲಕರಾದ ಶ್ರೀ ರಕ್ಷಣಾ ಟಿ.ಆರ್ ನಿರೂಪಿಸಿದರು. ಸಮಾರಂಭದಲ್ಲಿ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here