ಆ.3ರಂದು ದಾವಣಗೆರೆಯಲ್ಲಿ ಮಾಜಿ ಸಿ.ಎಂ. ಸಿದ್ದರಾಮಯ್ಯರವರ 75ನೇ ವರ್ಷದ ಜನ್ಮದಿನೋತ್ಸವ ಅಮೃತ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಪ್ರಹ್ಲಾದ್ ನೇಮಕ

0

ಪುತ್ತೂರು: ಕಾಂಗ್ರೆಸ್ ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅಮೃತ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ ಆ.3ರಂದು ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿಯಾಗಿ ಪ್ರಹ್ಲಾದ್ ಬಿ.ರವರು ನೇಮಕಗೊಂಡಿದ್ದಾರೆ.
ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯರವರ 75ನೇ ವರ್ಷದ ಜನ್ಮ ದಿನೋತ್ಸವ-ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿಗೆ ಹಲವು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಆರ್.ವಿ.ದೇಶಪಾಂಡೆ ಗೌರವಾಧ್ಯಕ್ಷರಾಗಿ, ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿ, ಹೆಚ್.ಸಿ.ಮಹದೇವಪ್ಪ ಸ್ವಾಗತ ಸಮಿತಿ ಅಧ್ಯಕ್ಷರಾಗಿ, ಬಸವರಾಜ ರಾಯರೆಡ್ಡಿ ಮಹಾಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಭೈರತಿ ಸುರೇಶ್ ಖಜಾಂಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ನೂತನವಾಗಿ 9 ಮಂದಿ ಪ್ರಧಾನ ಕಾರ್ಯದರ್ಶಿಗಳು ಮತ್ತು 9 ಮಂದಿ ಸಂಘಟನಾ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಪ್ರಹ್ಲಾದ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಮುಖಂಡರೊಂದಿಗೆ ಚರ್ಚಿಸಿ ದಾವಣಗೆರೆಗೆ ಆ.3ರಂದು ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಕರೆದುಕೊಂಡು ಬರುವಂತೆ ಪತ್ರದಲ್ಲಿ ತಿಳಿಸಲಾಗಿದೆ.
34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಕೆಪಿಸಿಸಿ ಮುಖಂಡರೂ, ಖ್ಯಾತ ಕ್ಯಾನ್ಸರ್ ತಜ್ಞರೂ ಆಗಿರುವ ಡಾ. ರಘು ಬೆಳ್ಳಿಪ್ಪಾಡಿರವರ ಪುತ್ರರಾದ ಪ್ರಹ್ಲಾದ್ ಬಿ.ರವರು ಶಾಂತಿನಗರ ತ್ರಿವೇಣಿ ಕ್ರಿಕೆಟ್ ಕ್ಲಬ್, ತ್ರಿವೇಣಿ ಯುವಕ ಮಂಡಲ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯಲ್ಲಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ‌. ಪ್ರಹ್ಲಾದ್ ಅವರ ಸಹೋದರ ಅಭಿಷೇಕ್ ಬಿ.ರವರು ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಪದಾಧಿಕಾರಿಯಾಗಿದ್ದಾರೆ.

LEAVE A REPLY

Please enter your comment!
Please enter your name here