ಹಿರೇಬಂಡಾಡಿ: ಒಕ್ಕೂಟದ ಪದಗ್ರಹಣ

0

ಹಿರೇಬಂಡಾಡಿ: ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ಇದರ ಉಪ್ಪಿನಂಗಡಿ ವಲಯದ ಹಿರೇಬಂಡಾಡಿ ಪಾಲೆತ್ತಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಜು.10ರಂದು ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಶಾಂತಿತ್ತಡ್ಡರವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ದ.ಕ.-2 ಇಲ್ಲಿನ ಸಿಎಚ್‌ಎಸ್ ವಿಭಾಗದ ಹಿರಿಯ ಯೋಜನಾಧಿಕಾರಿ ಉಮೇಶ್ ಪೂಜಾರಿಯವರು ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭಗೀರಥ ಪ್ರಯತ್ನವು ಜನಮಾನಸದಲ್ಲಿ ಬದಲಾವಣೆ ತಂದಿದೆ. ಅವರ ಯೋಜನೆ, ಯೋಚನೆ ಇಂದು ಯಶಸ್ಸು ಕಾಣುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರು ನಾಲ್ಕು ಗೋಡೆಗಳ ಮಧ್ಯದಿಂದ ಹೊರಬಂದು ಜಾಗೃತರಾಗುತ್ತಿದೆ ಎಂದರು.

ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪ್ಪಿನಂಗಡಿ ವಲಯದ ಅಧ್ಯಕ್ಷ ಮೋಹನ್ ಪಕ್ಕಳ, ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೋಮೇಶ್ ಕೆ., ಉಪ್ಪಿನಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಒಕ್ಕೂಟದ ನಿಕಟಪೂರ್ವ ಪದಾಧಿಕಾರಿಗಳು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾದ ವೀಳ್ಯ ಹಸ್ತಾಂತರಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ಹೊಸ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಸನ್ಮಾನ:

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಹಿರೇಬಂಡಾಡಿ ಒಕ್ಕೂಟದ ಪ್ರಥಮ ಅಧ್ಯಕ್ಷ ಗಂಗಾಧರ ಎಲಿಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಭೆಯಲ್ಲಿ ಒಕ್ಕೂಟದ ನಿಕಟಪೂರ್ವ, ನೂತನ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾ.ಪಂ.ಸದಸ್ಯರು, ಒಕ್ಕೂಟದ ಪ್ರಬಂಧಕ, ಸಂಯೋಜಕರು, ಸದಸ್ಯರುಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ರೋಹಿತ್ ಸರೋಳಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಚಂದ್ರಶೇಖರ ವಂದಿಸಿದರು. ನವೀನ್ ಪಡ್ಪು ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿಗಳಾದ ಸೌಮ್ಯ ಹಾಗೂ ಭವ್ಯ ಸಹಕರಿಸಿದರು.

LEAVE A REPLY

Please enter your comment!
Please enter your name here