ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುಪೂರ್ಣಿಮಾ, ಗುರುವಂದನಾ ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ ಜು.13ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಳಿನಿ ವಾಗ್ಲೆ ರವರು ಶಿಕ್ಷಕ ವೃತ್ತಿಯು ಶ್ರೇಷ್ಠವಾದ ವೃತ್ತಿ. ಹಾಗೆಯೇ ಶಿಕ್ಷಕರಿಗೆ ಇರಬೇಕಾದ ಗುಣಗಳನ್ನು ವಿವರಿಸಿದರು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ತ್ರಿವೇಣಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶೋಭಿತಾ ಸತೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿ ನಳಿನಿ ವಾಗ್ಲೆಯವರನ್ನು ಸನ್ಮಾನಿಸಲಾಯಿತು. ಬೋಧಕ ವರ್ಗ ಹಾಗು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ಹಾಗು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಈ ಕಾರ್ಯಕ್ರಮಕ್ಕೆ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ದೀಪಶ್ರೀ ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here