ಆಲಂಕಾರು: ನಿಡ್ಪಳ್ಳಿ ಗ್ರಾಮಕ್ಕೆ ಸಂಬಂಧಿಸಿ ನಿಡ್ಪಳ್ಳಿ ವಿಜಯನಗರದಲ್ಲಿರುವ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ಮತ್ತು ಆಲಂತಾಯ ಗ್ರಾಮಕ್ಕೆ ಸಂಬಂಧಿಸಿ ಆಲಂತಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಡಬ ತಹಶೀಲ್ದಾರ್ ಅನಂತಶಂಕರ್ ಜು.೧೬ರಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಕಂದಾಯ ಹಾಗು ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳ ಬಗ್ಗೆ ಹಾಗು ಸಮಸ್ಯೆಗಳ ಬಗ್ಗೆ ತಹಶೀಲ್ದಾರ್ರವರು ಅವಲೋಕನ ಮಾಡಲಿದ್ದಾರೆ. ನಿಡ್ಪಳ್ಳಿ ಹಾಗೂ ಆಲಂತಾಯ ಗ್ರಾಮಸ್ಥರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.