ದೊಣಿಗಲ್-ಹೆಗ್ಗದ್ದೆ ಮಧ್ಯೆ ಹೆದ್ದಾರಿ ಕುಸಿತ ಹಿನ್ನೆಲೆ – ಶಿರಾಡಿ ಘಾಟ್ ಸಂಚಾರದಲ್ಲಿ ವ್ಯತ್ಯಯ

0

* ಹಗಲು ಏಕಮುಖ ಸಂಚಾರಕ್ಕೆ ಅವಕಾಶ
* ರಾತ್ರಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ದೊಣಿಗಲ್ ಬಳಿ ಭೂಕುಸಿತ ಉಂಟಾಗಿದ್ದು ಇದರಿಂದಾಗಿ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ದೊಣಿಗಲ್-ಹೆಗ್ಗದ್ದೆ ತನಕದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಹಗಲು ವೇಳೆಯಲ್ಲಿ ಎಲ್ಲಾ ವಾಹನಗಳಿಗೆ ಏಕಮುಖ ಸಂಚಾರ ಹಾಗೂ ರಾತ್ರಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

ದೊಣಿಗಲ್ ಬಳಿಕ ಭೂಕುಸಿತ ಆಗಿರುವುದು

ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಕೆಳಭಾಗದಲ್ಲಿ ಜು.14ರಂದು ಬೆಳಿಗ್ಗೆ 10 ಗಂಟೆ ವೇಳೆಗೆ ಮತ್ತೆ ಭೂಕುಸಿತ ಉಂಟಾಗಿದೆ. ಸ್ಥಳಕ್ಕೆ ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದಾದ ಬಳಿಕ ಸಾರ್ವಜನಿಕ ಹಿತದೃಷ್ಟಿಯಿಂದ ಶಿರಾಡಿ ಘಾಟ್‌ನ ದೊಣಿಗಲ್-ಹೆಗ್ಗದ್ದೆ ತನಕದ ಹೆದ್ದಾರಿಯಲ್ಲಿ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಹಾಗೂ ಹಗಲು ಸಮಯದಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಏಕಮುಖವಾಗಿ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ತನಕ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು, ಕಾರುಗಳು, ಜೀಪು, ದ್ವಿಚಕ್ರ ವಾಹನಗಳು ಹಾಗೂ ತುರ್ತು ವಾಹನಗಳಿಗೆ (ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನ) ಮಾತ್ರ ಸಂಚರಿಸಲು ಅನುಮತಿಸಲಾಗಿದೆ. ಇನ್ನಿತರ ಎಲ್ಲಾ ರೀತಿಯ ವಾಹನಗಳ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here