ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2022-23ನೇ ಸಾಲಿನ ನೂತನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಕ್ಲಬ್ಸ್ ಮತ್ತು ಅಸೋಸಿಯೇಶನ್ಗಳ ಉದ್ಘಾಟನೆ ಸಮಾರಂಭವು ಜು.16 ರಂದು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ಜರಗಲಿದೆ.
ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ್ ಹೆಗ್ಡೆ, ಕಾರ್ಯದರ್ಶಿ ಪ್ರಫುಲ್ಲ ಜ್ಯೋತ್ಸ್ನಾ ನೊರೋನ್ಹಾ, ಜೊತೆ ಕಾರ್ಯದರ್ಶಿ ರಶ್ಮಿ ಎಂ.ಡಿರವರನ್ನೊಳಗೊಂಡ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ|ಎಚ್.ಮಾಧವ ಭಟ್ರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಲಾರೆನ್ಸ್ ಮಸ್ಕರೇನ್ಹಸ್ರವರು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಫಿಲೋಮಿನಾ ಕಾಲೇಜು ಕ್ಯಾಂಪಸ್ ನಿರ್ದೇಶಕ ಸ್ಟ್ಯಾನಿ ಪಿಂಟೋ, ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಜೆ ರೈಯವರು ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಪ್ರಶಾಂತ್ ಭಟ್ ಪಿ, ಫಿಲೋಮಿನಾ ಮೊಂತೇರೊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.