ಅನಾರೋಗ್ಯದಿಂದಿದ್ದ ಕೂಲಿ ಕಾರ್ಮಿಕ ಮೃತ್ಯು – ವಾರಸುದಾರರ ಪತ್ತೆಗೆ ಪೊಲೀಸ್ ಮನವಿ

0

ಪುತ್ತೂರು:ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಜು.14ರಂದು ರಾತ್ರಿ ಮೃತಪಟ್ಟಿದ್ದಾರೆ. ಮೃತ ಕೂಲಿ ಕಾರ್ಮಿಕನ ವಾರಸುದಾರರಿದ್ದಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸಾಮೆತ್ತಡ್ಕದಲ್ಲಿ ಕೂಲಿ ಕಾರ್ಮಿಕರೊಬ್ಬರು ಜು.14ರಂದು, ‘ನಾನು ಕೊಪ್ಪಳ ಜಿಲ್ಲೆಯ ಶರಣಪ್ಪ’ ಎಂದು ಹೇಳಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಸ್ಥಳೀಯರು ಧನ್ವಂತರಿ ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here