ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ

0

ಬೇಸಾಯದ ಗತ ವೈಭವ ಮರುಕಳಿಸಲಿದೆ – ಕೇಶವಪ್ರಸಾದ್ ಮುಳಿಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ನೈವೇದ್ಯಕ್ಕಾಗಿ ದೇವರಮಾರು ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ರಮವನ್ನು ಜು. 16ರ ಸಂಕಷ್ಟ ಚತುರ್ಥಿಯಂದು ನೆರವೇರಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶಪ್ರಸಾದ್ ಅವರು ಬಿತ್ತನೆ ಬೀಜವನ್ನು ಪ್ರಗತಿಪರ ಕೃಷಿಕ ಜಯಂತ ಪಡ್ನೂರು ಎಂಬವರಿಗೆ ಹಸ್ತಾಂತರಿಸುವ ಮೂಲಕ ಬೀಜ ಬಿತ್ತಲು ಚಾಲನೆ ನೀಡಲಾಯಿತು.

ಬೇಸಾಯದ ಗತ ವೈಭವ ಮರುಕಳಿಸಲಿದೆ:

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ದೇವರಮಾರು ಗದ್ದೆಯಲ್ಲಿ ಬಿತ್ತನೆ ಮಾಡುವ ಮೂಲಕ ಬೇಸಾಯದ ಗತಕಾಲದ ವೈಭವನ್ನು ಮರುಕಳಿಸಿದೆ. ಈ ಒಂದು ಗದ್ದೆಯಲ್ಲಿ ಶ್ರೀ ದೇವರ ಅನುಗ್ರಹದಿಂದ ಉತ್ತಮ ಪೈರು ಬಂದು ಶ್ರೀ ದೇವರ ನೈವೇದ್ಯಕ್ಕೆ ಉಪಯೋಗ ಆಗುವಂತಾಗಲಿ ಎಂದು ಪ್ರಾರ್ಥಿಸಿದರು. ಬೆಳಿಗ್ಗೆ ದೇವಳದ ಸತ್ಯಧರ್ಮ ನಡೆಯಲ್ಲಿ ಬಿತ್ತನೆ ಬೀಜವನ್ನು ಇಟ್ಟು ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಬಳಿಕ ದೇವರಮಾರು ಗದ್ದೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಾರ್ಥನೆಯೊಂದಿಗೆ ಬೀಜ ಬಿತ್ತುವ ಕಾರ್ಯಕ್ರಮ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ಸುಧಾ ಎಸ್ ರಾವ್, ರಾಮದಾಸ್ ಗೌಡ, ವೀಣಾ ಬಿ.ಕೆ, ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ್ ರೈ ಬಳ್ಳಮಜಲು, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಕೃಷಿಕ ಸುದೇಶ್ ಚಿಕ್ಕಪುತ್ತೂರು, ಇಂದುಶೇಖರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here